ಕೆ.ಇ. ಬೋರ್ಡ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ
Inauguration of Student Union at K.E. Board Pre-University College
ಧಾರವಾಡ 11 : ಕೆ.ಇ. ಬೋರ್ಡ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವು ಭಾರತ ಮಾತೆಗೆ ಪುಷ್ಪಾರ್ಚನೆ ಹಾಗೂ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಯಿತು.ಮುಖ್ಯ ಅತಿಥಿಗಳಾಗಿ ಕ.ವಿ.ವಿ. ಸಿಂಡಿಕೇಟ್ ಸದಸ್ಯರಾದ ಶ್ಯಾಮ ಮಲ್ಲನಗೌಡರ್, ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ. ಎ. ಸಿದ್ಧಾಂತಿ ಹಾಗೂ ಕಾರ್ಯಾಧ್ಯಕ್ಷೆ ಡಾ. ಸುನೀತಾ ಪರೋಹಿತ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶ್ರೀಮತಿ ಅನುರಾಧಾ ಹುಯಿಲಗೋಳ ಅತಿಥಿಗಳನ್ನು ಪರಿಚಯಿಸಿದರು. ಜ್ಯೋತಿ ಕಡೆಮನಿ ಸ್ವಾಗತಿಸಿದರು. ಶ್ರೀಮತಿ ಲಕ್ಷ್ಮೀ ಏಣಗಿ ಪ್ರಾಸ್ತಾವಿಕ ನುಡಿ ಸಲ್ಲಿಸಿದರು. ಮುಖ್ಯ ಅತಿಥಿಗಳು ಶಿಕ್ಷಣ, ಶಿಸ್ತು, ಆರೋಗ್ಯ ಹಾಗೂ ಉತ್ತಮ ಜೀವನ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಆನಂದ ಎಲಿಗಾರ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.ಪ್ರಶಾಂತ ಪೀಸೆ ವಂದನಾರೆ್ಣ ಸಲ್ಲಿಸಿದರು. ಶಂಕ್ರಮ್ಮ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪ್ರೊ. ಮಂಜುನಾಥ ಜಿ., ಗೌತಮಿ ಬೋಸಲೆ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 