ಬೆಡಸಗಾಂವ ಸಹಕಾರಿ ಸಂಘದಲ್ಲಿ ನೂತನ ರಸಗೊಬ್ಬರ ಹಾಗೂ ಕೀಟನಾಶಕ ಮಳಿಗೆ ಶುಭಾರಂಭ
Inauguration of a new chemical fertilizer and pesticide outlet at Bedasagaon Cooperative Society
ಲೋಕದರ್ಶನ ವರದಿ
ಮುಂಡಗೋಡ: ತಾಲೂಕಿನ ಬೆಡಸಗಾಂವ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತ ವತಿಯಿಂದ ರೈತರ ಅನುಕೂಲಕ್ಕಾಗಿ ನೂತನ ರಸಗೊಬ್ಬರ ಹಾಗೂ ಕೀಟನಾಶಕ ಓಷಧಿಗಳ ಮಳಿಗೆಯನ್ನು ಜುಲೈ 12ರಂದು ಶ್ರೀ ದೇವರ ಪೂಜಾ ಕಾರ್ಯಕ್ರಮದೊಂದಿಗೆ ಉದ್ಘಾಟಿಸಲಾಯಿತು. ಮುಂಡಗೋಡ ತಾಲೂಕಿನ ಬೆಡಸಗಾಂವ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಅಡಿಕೆ, ಭತ್ತ, ಜೋಳ ಸೇರಿದಂತೆ ವಿವಿಧ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಖರೀದಿಸಲು ದೂರದ ಪಟ್ಟಣಗಳಿಗೆ ತೆರಳಬೇಕಾಗುತ್ತಿತ್ತು.
ಇದರಿಂದ ರೈತರಿಗೆ ಸಮಯ ಮತ್ತು ಪ್ರಯಾಣ ವೆಚ್ಚದ ಹೆಚ್ಚುವರಿ ಹೊರೆ ಉಂಟಾಗುತ್ತಿತ್ತು. ರೈತರ ಬಹುದಿನಗಳ ಬೇಡಿಕೆಯನ್ನು ಪರಿಗಣಿಸಿದ ಸಹಕಾರಿ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗವು ಪ್ರತ್ಯೇಕವಾಗಿ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆಯನ್ನು ಆರಂಭಿಸಿದ್ದು, ಇದರಿಂದ ರೈತರಿಗೆ ಒಂದೇ ಸ್ಥಳದಲ್ಲಿ ಗುಣಮಟ್ಟದ ಕೃಷಿ ಪರಿಕರಗಳು ಲಭ್ಯವಾಗಲಿವೆ. ಜೊತೆಗೆ ಸಮಯ ಮತ್ತು ಹಣದ ಉಳಿತಾಯವಾಗುವುದರೊಂದಿಗೆ ಸಂಘದ ವ್ಯವಹಾರ ವೃದ್ಧಿಗೂ ಸಹಕಾರಿಯಾಗಲಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.
ಈ ವೇಳೆಯಲ್ಲಿ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎಂ. ನಾಯ್ಕ, ಸಂಘದ ಅಧ್ಯಕ್ಷ ಜೈದೇವ ನಾಯ್ಕ (ಬೆಕ್ಕೋಡ), ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿ ನಿರ್ದೇಶಕ ಕಾಂತರಾಜ ನಾಯ್ಕ (ಬೆಕ್ಕೋಡ), ಸಂಘದ ಮಾಜಿ ಅಧ್ಯಕ್ಷ ಹಾಗೂ ಸಹಕಾರಿ ಧುರೀಣ ವಿ.ಎಸ್. ನಾಯ್ಕ (ಬೆಡಸಗಾಂವ), ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರದೀಪ್ ಆಯ್. ನಾಯ್ಕ, ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ, ಸಂಘದ ಸದಸ್ಯರು, ಸುತ್ತಮುತ್ತಲಿನ ಗ್ರಾಮಗಳ ರೈತರು, ಗ್ರಾಹಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 