ಎಸ್ಕೆವಿವಿಎಂಎಸ್ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ
Inauguration of cultural and sports activities at SKVVMS College
ಲೋಕದರ್ಶನ ವರದಿ
ವಿಜಯಪುರ 22: ಬಿ.ಡಿ.ಪಿ.ಎಚ್.ಡಬ್ಲ್ಯು. ಅಸೋಸಿಯೇಷನ್ ಆಶ್ರಯದ ಎಸ್ಕೆವಿವಿಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ 2026ಹಿ27್ಫೂ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಚಾರ್ಯ ಬಿ.ಎಸ್. ಬಾಪಗೊಂಡ ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಿದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಆರಿ್ಜ. ಭಾವಿಕಟ್ಟಿ ಮಾತನಾಡಿ, ನಿರಂತರ ಪರಿಶ್ರಮ ಮತ್ತು ಶಿಸ್ತು ಕ್ರೀಡಾ ಕ್ಷೇತ್ರದಲ್ಲಿ ಯಶಸ್ಸಿನ ಮೂಲವಾಗಿದ್ದು, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿನೋದ ಖೇಡರ ಮಾತನಾಡಿ, ಸಂಸ್ಥೆಯಲ್ಲಿರುವ ಕ್ರೀಡಾ ಸೌಲಭ್ಯಗಳು ಹಾಗೂ ಶಿಕ್ಷಕರ ಮಾರ್ಗದರ್ಶನವನ್ನು ಸದುಪಯೋಗಪಡಿಸಿಕೊಂಡು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.
ಈ ಸಂದರ್ಭದಲ್ಲಿ 2025ಹಿ26್ಫೂ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಡಿ. ಹೆಬ್ಬಿ, ಬಿ.ವಿ. ಬೊಮ್ಮನಹಳ್ಳಿ, ಎಸ್.ಐ. ಬಿರಾದಾರ, ಸಿ.ಎಂ. ಹಂಚಿನಾಳ, ಎಸ್.ವಿ. ರಜಪೂತ ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 