ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರದರ್ಶನ ಉದ್ಘಾಟನೆ: ಪ್ರಾಚಾರ್ಯ ಜರಕುಂಟಿ
Inauguration of exhibition of competitive exam books: Principal Jarakunti
ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರದರ್ಶನ ಉದ್ಘಾಟನೆ: ಪ್ರಾಚಾರ್ಯ ಜರಕುಂಟಿ
ಮುಧೋಳ, 24 : ಮುಧೋಳ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ಮಾರ್ಗದರ್ಶನ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ.23 ರಿಂದ 30ರ ವರೆಗೆ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಗ್ರಂಥಾಲಯದ ಒಳಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಕಾರಣ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಕೊಳ್ಳಬೇಕೆಂದು ಪ್ರಾಚಾರ್ಯ ಡಾ.ಎಮ್.ಆರ್.ಜರಕುಂಟಿ ಹೇಳಿದರು.
ಸ್ಪರ್ಧಾತ್ಮಕ ಪುಸ್ತಕಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಯುಪಿಎಸ್ಸಿ, ಕೆಪಿಎಸ್ಸಿ, ಬ್ಯಾಂಕಿಂಗ್, ರೈಲ್ವೆ, ಎಸ್‌ಎಸ್‌ಸಿ, ನೆಟ್, ಕೆಎಎಸ್, ಐಎಎಸ್, ಪಿಎಸ್‌ಐ, ಐಪಿಎಸ್ ಮುಂತಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಪುಸ್ತಕಗಳು ಪ್ರದರ್ಶನದಲ್ಲಿವೆ ವಿದ್ಯಾರ್ಥಿಗಳು ಈ ಪುಸ್ತಕಗಳನ್ನು ಬಳಸಿಕೊಂಡು ಸಾಮಾನ್ಯ ಜ್ಞಾನ, ಸಾಮಾನ್ಯ ಅಧ್ಯಯನ, ತಾರ್ಕಿಕತೆ, ಪ್ರಸ್ತುತ ಘಟನೆಗಳ ಮತ್ತು ವಿಷಯವಾರು ಮಾರ್ಗದರ್ಶಕ ಪುಸ್ತಕಗಳನ್ನು ಓದಿಕೊಂಡು ತಮ್ಮ ಜ್ಞಾನವನ್ನು ವೃದ್ದಿಗೊಳಿಸಿಕೊಳ್ಳಬೇಕೆಂದು ಹೇಳಿದರು.
ಗ್ರಂಥಪಾಲಕ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಮಾರ್ಗದರ್ಶನ ಘಟಕದ ಅಧ್ಯಕ್ಷ ಡಾ.ಚಿರಂಜೀವಿ ಎಲ್.ಎಂ ಈ ಕಾರ್ಯಕ್ರಮವನ್ನು ಸಂಯೋಜಿಸಿ, ವಿದ್ಯಾರ್ಥಿಗಳಿಗೆ ಪುಸ್ತಕಗಳ ವಿವರ ಹಾಗೂ ಅವುಗಳನ್ನು ಹೇಗೆ ಉಪಯೋಗಿಸಿಕೊಳ್ಳಬೇಕೆಂಬುದರ ಕುರಿತು ಮಾರ್ಗದರ್ಶನ ನೀಡಿದರು.
ಐಕ್ಯೂಎಸಿ ಸಂಯೋಜಕ ಎ.ಆರ್.ಕಡೂರು, ಗ್ರಂಥಾಲಯ ಸಲಹಾ ಸಮಿತಿಯ ಅಧ್ಯಕ್ಷೆ ಎಸ್.ಎಸ್. ಬಿರಾದರ, ಸಹಾಯಕ ಗ್ರಂಥಪಾಲಕಿ ಎಸ್.ಎಸ್.ಕೊಣ್ಣೂರಮಠ, ಗ್ರಂಥಾಲಯದ ಸಹಾಯಕ ಬಿ.ವಿ. ಪೂಜಾರಿ, ಗ್ರಂಥಾಲಯದ ಹೆಲ್ಪರ್ ಬಿ.ಕೆ.ಕರಗುಳಿ, ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 