ಶಿಂಧೋಳಿ ಮತ್ತು ಬಡಾಲ ಅಂಕಲಗಿಯಲ್ಲಿ ಆಧುನಿಕ ಬಸ್ ತಂಗು ದಾಣಗಳ ಉದ್ಘಾಟನೆ
Inauguration of modern bus shelters at Shindholi and Badala Ankalagi
ಲೋಕದರ್ಶನ ವರದಿ
ಬೆಳಗಾವಿ ಜು 06: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರಿಗೆ ಮಳೆ, ಬಿಸಿಲು ರಕ್ಷಣೆ ಒದಗಿಸುವ ಉದ್ದೇಶದಿಂದ ನಿರ್ಮಿಸಲಾದ ಆಧುನಿಕ ಬಸ್ ತಂಗುದಾಣಗಳನ್ನು ಶಿಂಧೋಳಿ ಮತ್ತು ಬಡಾಲ ಅಂಕಲಗಿ ಗ್ರಾಮಗಳಲ್ಲಿ ಸೋಮವಾರ ಉದ್ಘಾಟಿಸಲಾಯಿತು. ರಾಜ್ಯಸಭೆಯ ಮಾಜಿ ಸಂಸದ ಈರಣ್ಣ ಕಡಾಡಿ ಅವರು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ನಿಧಿಯಿಂದ ನಿರ್ಮಿಸಲಾದ ಬಸ್ ತಂಗುದಾಣಗಳನ್ನು ಉದ್ಘಾಟಿಸಿ ಮಾತನಾಡಿದರು.
"ಜನರ ಬೇಡಿಕೆಗಳಿಗೆ ಅನುಗುಣವಾಗಿ ಸಂಸದರ ನಿಧಿಯನ್ನು ಸಂಪೂರ್ಣ ಪಾರದರ್ಶಕವಾಗಿ ಅಗತ್ಯ ಕಾಮಗಾರಿಗಳಿಗೆ ಬಳಸಲಾಗಿದೆ. ಅಭಿವೃದ್ಧಿ ಕಾಮಗಾರಿಗಳು ಕೇವಲ ಕಾಗದದಲ್ಲೇ ಉಳಿಯದೆ ಜನರಿಗೆ ನೇರ ಪ್ರಯೋಜನವಾಗಬೇಕು. ಮುಂದೆಯೂ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ನನ್ನ ಬೆಂಬಲ ನಿರಂತರವಾಗಿರಲಿದೆ" ಎಂದು ಹೇಳಿದರು.
ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲದ ಮಾಜಿ ಅಧ್ಯಕ್ಷ ಧನಂಜಯ ಜಾಧವ ಮಾತನಾಡಿ, "ಶಿಂಧೋಳಿ ಮತ್ತು ಬಡಾಲ ಅಂಕಲಗಿ ಗ್ರಾಮಗಳ ಸಾರ್ವಜನಿಕರು ಹಾಗೂ ಶಾಲಾ- ಕಾಲೇಜ ವಿದ್ಯಾರ್ಥಿಗಳು ಸೂಕ್ತ ಬಸ್ ತಂಗುದಾಣದ ಕೊರತೆಯಿಂದ ಮಳೆ ಮತ್ತು ಬಿಸಿಲಿನಲ್ಲಿ ತೊಂದರೆ ಅನುಭವಿಸುತ್ತಿದ್ದರು. ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಈರಣ್ಣ ಕಡಾಡಿ ಅವರು ಸಂಸದರ ನಿಧಿಯಿಂದ ಅನುದಾನ ಮಂಜೂರು ಮಾಡಿ ಆಧುನಿಕ ತಂಗುದಾಣಗಳನ್ನು ನಿರ್ಮಿಸಿದ್ದಾರೆ. ಸಾರ್ವಜನಿಕರು ಈ ಆಸ್ತಿಯನ್ನು ಸ್ವಚ್ಛವಾಗಿ ಕಾಪಾಡಿಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು" ಎಂದು ಮನವಿ ಮಾಡಿದರು.
ಈರಣ್ಣ ಕಡಾಡಿ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ ಅವರು, "ಅನುದಾನ ಮಂಜೂರು ಮಾಡುವುದಷ್ಟೇ ಅಲ್ಲದೆ, ಕಾಮಗಾರಿಗಳ ಗುಣಮಟ್ಟ ಹಾಗೂ ಸಮಯಕ್ಕೆ ಪೂರ್ಣಗೊಳ್ಳುವಿಕೆಯನ್ನು ಸ್ವತಃ ಮೇಲ್ವಿಚಾರಣೆ ಮಾಡುವುದು ಅವರ ವಿಶೇಷತೆ" ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸತೀಶ್ ಶಹಾಪೂರಕರ, ಬಾಬಾಗೌಡ ಪಾಟೀಲ, ಪಿರಾಜಿ ಅನಗೋಳಕರ, ಸವಿತಾ ಮುಚ್ಚಂಡಿ, ಪಿರಾಜಿ ಕಣಬರಗಿ, ಮರೆಪ್ಪ ಶಹಾಪೂರಕರ, ಅಶೋಕ ಚಾಪಗಾಂವ, ಪಿಂಟು ಕಮತಗಿ, ರಮೇಶ್ ಕಲಂಬಾವಿ, ಬಸವರಾಜ ಕಮತಗಿ, ರಾಹುಲ್ ಬೆಳಗಾವಿ, ಶಿವಪ್ಪ ಬೆಳಗಾವಿ, ರಮೇಶ್ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 