ನೂತನ ಶಾಲಾ ಕೋಠಡಿ ಉದ್ಘಾಟನೆ
Inauguration of new school building
ಯಮಕನಮರಡಿ 01 : ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಗುಟಗುದ್ದಿ ಗ್ರಾಮದಲ್ಲಿ ಆರ್.ಎಂ.ಎಸ್.ಎ ಯೋಜನೆಯಡಿ ನಿರ್ಮಿಸಲಾದ ನೂತನ ಸರ್ಕಾರಿ ಪ್ರೌಢಶಾಲಾ ಕಟ್ಟಡದ ಉದ್ಘಾಟನೆಯನ್ನು ಇಂದು ನೆರವೇರಿಸಿದರು.
ಕ್ಷೇತ್ರದ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ದೊರಕುವ ಉದ್ದೇಶದಿಂದ ಅಗತ್ಯವಿರುವ ಎಲ್ಲ ಕಡೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯವನ್ನು ವೇಗವಾಗಿ ಕೈಗೊಳ್ಳಲಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣವೇ ಅತ್ಯಂತ ಮಹತ್ವದ ಅಡಿಗಲ್ಲು ಎಂಬ ನಂಬಿಕೆಯಿಂದ, ನಮ್ಮ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸುವ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುತ್ತಿದೆ. ನಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಇಂತಹ ಅಭಿವೃದ್ಧಿ ಕಾರ್ಯಗಳು ಸದಾ ನೆರವಾಗಲಿ ಎಂಬ ಆಶಯ ನನ್ನದು.ಎಂದು ಹೇಳಿದರು ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 