ಇಂಡಿಯಲ್ಲಿ ಕ್ಷತ್ರಿಯ ಸೌಹಾರ್ದ ಸಹಕಾರಿ ಸಂಘದ ಬ್ಯಾಂಕ್ ಉದ್ಘಾಟನೆ
Inauguration of the Kshatriya Souharda Cooperative Society Bank in Indi
ಇಂಡಿ, ಆ.೨೪: ರಾಜ್ಯದಲ್ಲಿ ಯುವ ಸಮುದಾಯದ ಸಂಖ್ಯೆ ಹೆಚ್ಚಿದ್ದು, ಅವರಿಗೆ ಉದ್ಯೋಗಾವಕಾಶಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಸೌಹಾರ್ದ ಸಹಕಾರಿ ಸಂಘಗಳು ಕೇವಲ ಠೇವಣಿ ಸಂಗ್ರಹಣೆ ಹಾಗೂ ಸಾಲ ನೀಡುವುದಕ್ಕೆ ಸೀಮಿತವಾಗದೆ, ವಿವಿಧ ಕ್ಷೇತ್ರಗಳ ತಜ್ಞರನ್ನು ಕರೆಸಿ ಯುವಕರಿಗೆ ತರಬೇತಿ ನೀಡಿ ಸ್ವಂತ ಉದ್ಯೋಗ ಆರಂಭಿಸಲು ಪ್ರೋತ್ಸಾಹಿಸಬೇಕು ಎಂದು ಸಿದ್ಧಸಿರಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ರಾಮನಗೌಡ ಪಾಟೀಲ ಹೇಳಿದರು.
ನಗರದಲ್ಲಿ ಭಾನುವಾರ ಕ್ಷತ್ರಿಯ ಸೌಹಾರ್ದ ಸಹಕಾರಿ ಸಂಘದ ಬ್ಯಾಂಕ್ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಯುವಕ-ಯುವತಿಯರು ಮನಸ್ಸು ಮಾಡಿದರೆ ಸಾಧಿಸಲು ಸಾಧ್ಯ. ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಕೆಲಸವನ್ನು ಸೌಹಾರ್ದ ಸಹಕಾರಿ ಸಂಘಗಳು ಮಾಡಬೇಕು ಎಂದು ಸಲಹೆ ನೀಡಿದರು.
ಸಹಕಾರಿ ಸಂಘಗಳ ನಿರೀಕ್ಷಕ ವಿಜಯಕುಮಾರ ನಾಯಕ್ ಮಾತನಾಡಿ, ಸಹಕಾರಿ ಸಂಘಗಳು ಸಹಾಯಕ ನಿಬಂಧಕರ ಕಚೇರಿಯಿಂದ ಯುವಕರಿಗೆ ದೊರೆಯುವ ವಿವಿಧ ಸಹಾಯ-ಸೌಲಭ್ಯಗಳ ಕುರಿತು ತರಬೇತಿ ನೀಡುವುದರ ಜೊತೆಗೆ, ಇಲಾಖೆಯಿಂದ ಸಿಗುವ ನೆರವನ್ನು ಒದಗಿಸುವಲ್ಲಿ ಸಹಕಾರ ನೀಡಬೇಕು ಎಂದರು.
ಕ್ಷತ್ರಿಯ ಸೌಹಾರ್ದ ಸಹಕಾರಿ ಸಂಘದ ವ್ಯವಸ್ಥಾಪಕ ನಿರ್ದೇಶಕ ವಿಲಾಸಕುಮಾರ ಶಿಂಧೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಟಬು ಕಟಬರ ಕ್ಷತ್ರಿಯ ಸಮಾಜ ಕುಲಗುರು ಶ್ರೀ ಕಲ್ಲಿನಾಥ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಕ್ಷತ್ರಿಯ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕ್ಷತ್ರಿಯ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕಟಬು-ಕಟಬರ ಸಮಾಜದ ರಾಜ್ಯಾಧ್ಯಕ್ಷ ಜಗದೀಶ ಕ್ಷತ್ರಿಯ, ಉದ್ಯಮದಾರ ರಮೇಶ ಗುತೇದಾರ, ಸ್ವತಂತ್ರ ಸಿಂಧೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸೌಹಾರ್ದ ಸಂಘದ ನಿರ್ದೇಶಕರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಸ್ವತಂತ್ರ ಸಿಂಧೆ ಹಾಗೂ ಶಿವು ಕಾಟಕರ ಅವರನ್ನು ಸ್ವಾಗತಿಸಲಾಯಿತು. ಮಹೇಶ ಶಿಂಧೆ ವಂದನಾರ್ಪಣೆ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 