ಕೊಪ್ಪಳ 05: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಮಾ. 04 ರಂದು ಕಾನೂನು ಸಲಹಾ ಕೇಂದ್ರವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜಾಸೋಮಶೇಖರ ಸಿ. ಆರ್ ಹಾಗೂ ಜಿಲ್ಲಾ ವರಿಷ್ಠಾಧಿಕಾರಿ ಜಿ. ಸಂಗೀತಾ ರವರು ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜಾಸೋಮಶೇಖರ ಸಿ. ಆರ್, ಕಾನೂನು ಸೇವಾ ಕೇಂದ್ರಗಳನ್ನು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪ್ರಾರಂಭಿಸಲಾಗುತ್ತಿದ್ದು, ಈಗ ಪ್ರಾರಂಭಿಕ ಹಂತವಾಗಿ ಕೊಪ್ಪಳ, ಗಂಗಾವತಿ, ಕುಷ್ಟಗಿ, ಕಾರಟಗಿ ಹಾಗೂ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಆರಂಭಿಸಲಾಗುತ್ತಿದೆ. ನಂತರದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸೇವೆಗಳನ್ನು ವಿಸ್ತರಿಸಲಾಗುತ್ತದೆ. ಸಾರ್ವಜನಿಕರು ಕಾನೂನು ಸೇವಾ ಕೇಂದ್ರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸದಸ್ಯ ಕಾರ್ಯದಶರ್ಿ ಟಿ. ಶ್ರೀನಿವಾಸ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಮ್ ಕುಮಾರ ಎಸ್, ಜೆಎಂಎಫ್ಸಿ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶ ಹರೀಶ್ ಪಾಟೀಲ ರಂಗನಗೌಡ, ಜೆಎಂಎಫ್ಸಿ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮನು ಶರ್ಮಾ , ಜಿಲ್ಲಾ ವಕೀಲ ಸಂಘದ ಅಧ್ಯಕ್ಷರಾದ ಹೆಚ್.ಹೆಚ್ ಮುರುಡಿ, ಜಿಲ್ಲಾ ವಕೀಲ ಸಂಘದ ಕಾರ್ಯದಶರ್ಿ ಬಿ.ವಿ ಸಜ್ಜನ ಉಪಸ್ಥಿತರಿದ್ದರು.