ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನೆ
Inauguration of the National Service Project Unit
ಲೋಕದರ್ಶನ ವರದಿ
ಧಾರವಾಡ ೨೭: ಶಾಲೆಯ ಪ್ರತಿಯೊಬ್ಬ ಮಕ್ಕಳು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ತೊಡಗಿಸುವ ಮೂಲಕ ಸಮಾಜ ಸೇವೆಯನ್ನು ಕಲಿತು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಟಾಟಾ ಮೋಟರ್ಸ್ ಧಾರವಾಡ ಘಟಕದ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಶ್ರೀ ಶೆಟ್ಟಿ ಹೇಳಿದರು.
ಕಮಲಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಇದೇ ಸಂಧರ್ಭದಲ್ಲಿ ಟಾಟಾ ಮೋಟಾರ್ಸ್ ಕಂಪನಿ ವತಿಯಿಂದ ಶಾಲಾ ಮಕ್ಕಳಿಗೆ ಅಗ್ನಿ ಅವಘಡಗಳು ಸಂಭವಿಸಿದಾಗ ಹೇಗೆ ಬೆಂಕಿಯನ್ನು ನಂದಿಸಬೇಕೆAದು ಹಾಗೂ ಮುಂಜಾಗ್ರತೆಯಾಗಿ ಕೈಕೊಳ್ಳಬೇಕಾದ ಕ್ರಮಗಳ ಕುರಿತು ಪ್ರಾಯೋಗಿಕ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಇದರ ಜೊತೆಗೆ ಮಕ್ಕಳಿಂದ ಬೆಂಕಿಯನ್ನು ಹೇಗೆ ನಂದಿಸಬೇಕೆAದು ಎಂಬುದರ ಕುರಿತು ಪ್ರಾತ್ಯಕ್ಷಿಕೆ ಮಾಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯೋಪಾಧ್ಯಾಯರಾದ ರಮೇಶ್ ಯರಳಿ ಮಾತನಾಡಿ "ಮಕ್ಕಳು ತಮ್ಮ ವಿದ್ಯಾಭ್ಯಾಸದೊಂದಿಗೆ ಸಮಾಜ ಸೇವೆ ಮತ್ತು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಗುರುತಿಸಿಕೊಳ್ಳಬೇಕೆಂದು" ಸಲಹೆ ನೀಡಿದರು.
ಶಾಲೆಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಕಾರ್ಯಕ್ರಮ ಅಧಿಕಾರಿ ಎ. ಎಫ್. ಅಂಕಲಗಿ ಯೋಜನೆಯ ಕುರಿತು ಸಂಕ್ಷಿಪ್ತವಾಗಿ ಮಾತನಾಡಿದರು.
ಟಾಟಾ ಮೋಟಾರ್ಸ್ ಘಟಕದ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಶಾಲೆಯ ಸಿಬ್ಬಂದಿಯಾದ ಜಾಕೀರ್ ಹುಸೇನ ಮುಲ್ಲಾ, ರಾಜು ನಾಯಕ, ಶಿವಾನಂದ ಬಾಗೋಡಿ, ಕೆ. ಎಸ್. ಪಾಟೀಲ, ವಾರೀಜಾಕ್ಷಿ ಭಟ್, ವರ್ಷಾ ಪವಾರ, ಮಂಜುಳಾ ಬಡಿಗೇರ ಮುಂತಾದವರು ಉಪಸ್ಥಿತರಿದ್ದರು. ಆರ್. ಜಿ. ನಾಯಕ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 