ಬೆಳಗಾವಿ,22: ರಾಣಿ ಚನ್ನಮ್ಮಾ ವಿಶ್ವ ವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗವು ಹುಕ್ಕೇರಿ ತಾಲ್ಲೂಕಿನ ನರಸಿಂಗಪುರ ಗ್ರಾಮದಲ್ಲಿ ಸಮಾಜಕಾರ್ಯ ಗ್ರಾಮೀಣ ಶಿಬಿರ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀಮತಿ ಸುನಿತಾ ಹರಿಜನ ಅಧ್ಯಕ್ಷರು, ಗ್ರಾಮ ಪಂಚಾಯತಿ ನರಸಿಂಗಪುರ ಶಿಬಿರವನ್ನು ಉದ್ಘಾಟಿಸಿದರು.
ಡಾ. ಅಶೋಕ ಎ ಡಿಸೋಜಾ ಮುಖ್ಯಸ್ಥರು, ಸಮಾಜಕಾರ್ಯ ಅಧ್ಯಯನ ವಿಭಾಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಗ್ರಾಮದ ಮುಖಂಡರಾದ ಅನಿಲ ಮೊಖಾಶಿ ಉಪಸ್ಥಿತರಿದ್ದರು.
ಶಿಬಿರದ ಸಂಯೋಜಕರಾದ ದೇವತಾ ಗಸ್ತಿ ಸಹಾಯಕ ಪ್ರಾಧ್ಯಾಪಕರು, ಸಹ ಸಂಯೋಜಕರಾದ ದಾವುದ ನಗಚರ್ಿ ಹಾಗೂ ರವಿಕುಮಾರ ದೊಡ್ಡಮನಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪ್ರಮೋದ ಕೋಲಕಾರ ನಿರೂಪಿಸಿದರು ಮತ್ತು ವಿದ್ಯಾಥರ್ಿಗಳು ಉಪಸ್ಥಿತರಿದ್ದರು.