ವಿದ್ಯಾರ್ಥಿ ಸಂಘದ ಉದ್ಘಾಟನೆ
Inauguration of the Student Union
ಲೋಕದರ್ಶನ ವರದಿ
ವಿದ್ಯಾರ್ಥಿ ಸಂಘದ ಉದ್ಘಾಟನೆ
ಧಾರವಾಡ 18: ಜೆ.ಎಸ್.ಎಸ್. ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ, ಧಾರವಾಡ ಇಲ್ಲಿ ನೆರವೇರಿದ 2025-26 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಈರೇಶ ಅಂಚಟಗೇರಿ, ಗೌರವಾನ್ವಿತ ಮಾಜಿ ಮಹಾಪೌರರು ಹಾಗೂ ಸಭಾ ನಾಯಕರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಇವರು ಮಾತನಾಡಿ, ಒಬ್ಬ ಉತ್ತಮ ಶಿಕ್ಷಕರ ಹೇಗೆ ಇರಬೇಕು ಎಂದು ಅಭಿಪ್ರೇರಣೆ ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಡಾ. ಸೂರಜ್ ಜೈನ್ ಇವರು ಪ್ರಸ್ತುತ ಸಮಾಜದಲ್ಲಿ ಶಿಕ್ಷಕರ ಪಾತ್ರಗಳು ಮತ್ತು ಒಬ್ಬ ಒಳ್ಳೆಯ ಶಿಕ್ಷಕನ ಅವಶ್ಯಕತೆ ಎಷ್ಟು ಇದೆ ಎಂಬುದನ್ನು ಅಚ್ಚುಕಟ್ಟಾಗಿ ವಿವರಿಸಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಡಾ. ಸುನೀತಾ ಪಾಟೀಲ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಆಶಾ ಭೈರಿ ವಿದ್ಯಾರ್ಥಿ ಸಂಘವನ್ನು ಪರಿಚಯಿಸಿದರು. ಕು. ಕಾವೇರಿ ಹೊನ್ನತ್ತಿ ಪ್ರಾರ್ಥಿಸಿದರು. ಕು. ಪ್ರಜ್ವಲ ಪತ್ತಾರ ವಂದಿಸಿದರು. ಕು. ಭಾರತಿ ಸಾಲಿಮಠ ಕಾರ್ಯಕ್ರಮ ನಿರೂಪಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 