ವಿದ್ಯಾರ್ಥಿ ಸಂಘ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ
Inauguration of the Student Union and Sports Activities
ಲೋಕದರ್ಶನ ವರದಿ
ಧಾರವಾಡ, ಆ. 7: ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದ ಜೊತೆಗೆ ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ನಾಯಕತ್ವ ಗುಣ, ಸಂವಹನ ಕೌಶಲ್ಯ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಜೆ.ಎಸ್.ಎಸ್. ಆರ್.ಎಸ್.ಎಸ್. ಹುಕ್ಕೇರಿಕರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ. ಅಜಿತಪ್ರಸಾದ್ ಹೇಳಿದರು.
ನಗರದ ಜೆ.ಎಸ್.ಎಸ್. ಆರ್.ಎಸ್.ಎಸ್. ಹುಕ್ಕೇರಿಕರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ದೀಪ ಬೆಳಗಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನವು ಪ್ರತಿಯೊಬ್ಬರ ಬದುಕಿನ ಅತ್ಯಂತ ಮಹತ್ವದ ಹಂತವಾಗಿದ್ದು, ಈ ಅವಧಿಯಲ್ಲಿ ಜ್ಞಾನ, ಕೌಶಲ್ಯ, ವ್ಯಕ್ತಿತ್ವ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸೇವಾ ಮನೋಭಾವ, ಶಿಕ್ಷಣ ಕ್ಷೇತ್ರದ ಮೇಲಿನ ಕಾಳಜಿ ಹಾಗೂ ಯುವಜನರ ಅಭಿವೃದ್ದಿಯ ಆಶಯದಂತೆ ಜೆ.ಎಸ್.ಎಸ್. ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಅಗತ್ಯವಿರುವ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ. ಜಿನದತ್ತ ಹಡಗಲಿ ಮಾತನಾಡಿ, ಇಂದಿನ ಸಂದರ್ಭದಲ್ಲಿ ಮಾನವೀಯ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿದೆ. ವಿದ್ಯಾರ್ಥಿಗಳು ಯಾವುದೇ ಬಾಹ್ಯ ಆಕರ್ಷಣೆಗೆ ಒಳಗಾಗದೆ ಗುರಿಯತ್ತ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.
ಜೆ.ಎಸ್.ಎಸ್. ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಶ್ರೀ ಅರಿಹಂತ ಪ್ರಸಾದ್ ಮಾತನಾಡಿ, ಸಾಮಾಜಿಕ ಮಾಧ್ಯಮಗಳ ದುರುಪಯೋಗದಿಂದ ದೂರವಿದ್ದು ಅಮೂಲ್ಯವಾದ ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಕಳೆದ ವರ್ಷದ ವಾರ್ಷಿಕ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯೆ ಶ್ರೀಮತಿ ಭಾರತಿ ಶಾನಭಾಗ ವಹಿಸಿದ್ದರು. ಐಟಿಐ ಕಾಲೇಜಿನ ಪ್ರಾಚಾರ್ಯ ಶ್ರೀ ಮಹಾವೀರ ಉಪಾಧ್ಯೆ, ಜೆ.ಎಸ್.ಎಸ್. ಎಂ.ಸಿ.ಎ ವಿಭಾಗದ ನಿರ್ದೇಶಕ ಡಾ. ಸೂರಜ್ ಜೈನ್, ಉಪಪ್ರಾಚಾರ್ಯ ಡಾ. ಎಸ್.ಕೆ. ಪಾಟೀಲ, ದೈಹಿಕ ಶಿಕ್ಷಣ ಹಾಗೂ ಕ್ರೀಡಾ ನಿರ್ದೇಶಕ ಅರುಣಕುಮಾರ ಸವಣೂರ ಹಾಗೂ ವಿದ್ಯಾರ್ಥಿ ಕಾರ್ಯದರ್ಶಿ ಕು. ನಿಧಿ ಶೆಟ್ಟಿ ಉಪಸ್ಥಿತರಿದ್ದರು.
ಆರಂಭದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದರು. ಪ್ರೊ. ನಾಗರಾಜ ಪಾಟೀಲ ಪರಿಚಯಿಸಿದರು. ಶ್ರೀಮತಿ ಜಾಸ್ಮಿನ್ ಬಡೆಘರ್ ವರದಿ ವಾಚಿಸಿದರು. ಕು. ಭೂಮಿಕಾ ಗಿರಿಯಪ್ಪನವರ ನಿರೂಪಿಸಿದರು. ಕೊನೆಯಲ್ಲಿ ಕು. ಪ್ರಜ್ಞಾ ಹೆಗಡೆ ವಂದಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಪಾಲ್ಗೊಂಡಿದ್ದರು.
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು 