ಕಾನಿಪ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ನವೀಕೃತ ಕಚೇರಿ ಉದ್ಘಾಟನೆ

ಕಾನಿಪ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ನವೀಕೃತ ಕಚೇರಿ ಉದ್ಘಾಟನೆ  Inauguration of the renovated office of the Kanip District President and office bearers

ಲೋಕದರ್ಶನ ವರದಿ 

ಗದಗ 06: ನಗರದ ಮುಳಗುಂದ ರಸ್ತೆಯ ಪತ್ರಿಕಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ನವೀಕೃತ ಕಚೇರಿ ಉದ್ಘಾಟನೆ ಮತ್ತು ಪ್ರವೇಶ ದ್ವಾರದ ನಾಮಫಲಕ ಅನಾವರಣ ಹಾಗೂ ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಆಯ್ಕೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಫೆ.7 ರಂದು ಬೆಳಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ. 

ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಕೆ.ಪಾಟೀಲ ಕಚೇರಿ ಉದ್ಘಾಟನೆಗೊಳಿಸಿ, ನಾಮಫಲಕ ಅನಾವರಣಗೊಳಿಸುವರು. ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಗದಗ-ಹಾವೇರಿ ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಿ, ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧನೆ ಮಾಡುವರು. 

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ, ಕಾನಿಪ ರಾಜ್ಯ ಕಾರ್ಯದರ್ಶಿ ನಿಂಗಪ್ಪ ಚಾವಡಿ ಅವರು ಆಗಮಿಸುವರು. ಕಾನಿಪ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಅಧ್ಯಕ್ಷತೆ ವಹಿಸುವರು. 

ರಾಜ್ಯ ಕಾರ್ಯಕಾರಿಣಿ ಸದಸ್ಯ ಅರುಣಕುಮಾರ ಹಿರೇಮಠ, ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ, ಉಪಾಧ್ಯಕ್ಷ ಅನಿಲ ತೆಂಬದಮನಿ, ಪ್ರಭುಸ್ವಾಮಿ ಅರವಟಗಿಮಠ, ವಿ.ಡಿ.ಕಣವಿ, ಕಾರ್ಯದರ್ಶಿ ಸಂಗಪ್ಪ ವ್ಯಾಪಾರಿ, ಬನೇಶ ಕುಲಕರ್ಣಿ, ಚಂದ್ರಶೇಖರ ಕುಸ್ಲಾಪೂರ, ಖಜಾಂಚಿ ರಾಮಣ್ಣ ವಗ್ಗಿ ಸೇರಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಭಾಗವಹಿಸುವರು. 

ಕಾನಿಪ ಗಜೇಂದ್ರಗಡ ತಾಲೂಕು ಅಧ್ಯಕ್ಷ ಮಂಜುನಾಥ ರಾಠೋಡ, ಪ್ರಧಾನ ಕಾರ್ಯದರ್ಶಿ ಎಸ್‌.ಎಂ. ಸೈಯದ್, ಮುಂಡರಗಿ ತಾಲೂಕು ಅಧ್ಯಕ್ಷ ಶಿವಮೂರ್ತಿ ಹೊಂಬಳಗಟ್ಟಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನಗೌಡ ಪಾಟೀಲ, ಶಿರಹಟ್ಟಿ ತಾಲೂಕು ಅಧ್ಯಕ್ಷ ಎಂ.ಎಂ. ಸ್ವಾಮಿ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕುಲಕರ್ಣಿ, ಲಕ್ಷ್ಮೇಶ್ವರ ತಾಲೂಕು ಅಧ್ಯಕ್ಷ ಅಶೋಕ ಸೊರಟೂರ, ಪ್ರಧಾನ ಕಾರ್ಯದರ್ಶಿ ಪರಮೇಶ ಲಮಾಣಿ, ನರಗುಂದ ತಾಲೂಕು ಅಧ್ಯಕ್ಷ ಎಸ್‌.ಎಸ್‌. ಖಾನಪ್ಪಗೌಡ್ರ, ಪ್ರಧಾನ ಕಾರ್ಯದರ್ಶಿ ರಾಜೇಸಾಬ ಹೊಸಮನಿ ಹಾಗೂ ರೋಣ ತಾಲೂಕು ಅಧ್ಯಕ್ಷ ಮೆಹಬೂಬಸಾಬ ಮೋತೆಖಾನ, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಿ ಕಲಬುರ್ಗಿ ಸೇರಿ ತಾಲೂಕು ಘಟಕಗಳ ಎಲ್ಲ ಪದಾಧಿಕಾರಿಗಳು ಪ್ರತಿಜ್ಞಾವಿಧಿ ಸ್ವೀಕರಿಸುವರು.