ಕೃಷಿ ಸಖಿಯರಿಗೆ ಆರು ದಿವಸಗಳ ನಾಲ್ಕನೇ ಮಾಡ್ಯುಲ್ ತರಬೇತಿ ಕಾರ್ಯಕ್ರಮದ ಉದ್ಘಾಟನೆ
Inauguration of the six-day fourth-module training program for 'Krishi Sakhis'
ಲೋಕದರ್ಶನ ವರದಿ
ನೇಸರಗಿ 30 : ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ, ಬೆಳಗಾವಿ ಮತ್ತು ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಕೃಷಿ ಸಖಿಯರಿಗೆ ಆರು ದಿವಸಗಳ ನಾಲ್ಕನೇ ಮಾಡ್ಯುಲ್ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಮತ್ತಿಕೊಪ್ಪದ ಕೇಂದ್ರದ ಆವರಣದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿ ಮಾತನಾಡಿದ, ಕೃಷಿ ವಿಜ್ಞಾನ ಕೇಂದ್ರದ ಕಾರ್ಯಾಧ್ಯಕ್ಷ ಬಿ. ಆರ್. ಪಾಟೀಲ ಮಾತನಾಡಿ, ಕೃಷಿ ಸಖಿ ಎಂದರೆ ವ್ಯವಸಾಯದಲ್ಲಿ ರೈತರಿಗೆ ಸಹಕಾರ ನೀಡಿ ಕೃಷಿಯನ್ನು ಲಾಭದಾಯಕವಾಗಿ ನಡೆಯುವಂತೆ ಮಾರ್ಗದರ್ಶನ ಮಾಡುವ ಜವಾಬ್ದಾರಿಯನ್ನು ಹೊಂದಿರುವ ಮಹಿಳೆಯರಿಗೆ ಕೃಷಿ ಸಖಿಯರು ಎನ್ನಬಹುದು. ಕೃಷಿ ಸಖಿಯು ಕರ್ನಾಟಕ ಸರ್ಕಾರದ ಪ್ರತಿಪ್ಠಿತ ಸಂಜೀವಿನಿ-ಕರ್ನಾಟಕರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪರಿಕಲ್ಪನೆಯಾಗಿದೆ.
ಕೃಷಿಯನ್ನು ಲಾಭದಾಯಕವಾಗಿ ಮಾಡಲು ಹಾಗೂ ರೈತನ ಆದಾಯವನ್ನು ಹೆಚ್ಚಿಸಲು ರೈತರಿಗೆ ತಂತ್ರಜ್ಞಾನದ ಮಾರ್ಗದರ್ಶನ ಮಾಡುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಕೃಷಿ ಸಖಿಯರು ತಾಂತ್ರಿಕ ಜ್ಞಾನ ಪಡೆಯಲು ಆರು ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ. ಡಾ. ಪ್ರಭಾಕರ ಕೋರೆಯವರು ರೈತರ ಸೇವೆಗಾಗಿ ಅನುಷ್ಠಾನಗೊಳಿಸಿದ ಈ ಕೃಷಿ ವಿಜ್ಞಾನ ಕೇಂದ್ರವು ನುರಿತ ವಿಜ್ಞಾನಿಗಳನ್ನು ಹಾಗೂ ಉತ್ತಮ ಮೂಲಸೌಕರ್ಯಗಳನ್ನು ಹೊಂದಿದ್ದು, ರೈತರಿಗಾಗಿ ಈ ಸಂಸ್ಥೆಯ ಸೇವೆಯನ್ನು ರೈತರಿಗೆ ವಿಸ್ತರಿಸುವ ಮೂಲಕ ಕೃಷಿ ಸಖಿಯರು ಪರಿಣಾಮಕಾರಿಯಾದ ಸೇವೆಯನ್ನು ರೈತರಿಗೆ ಒದಗಿಸಲು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿ ಮಾತನಾಡಿ, ಕೃಷಿಯಲ್ಲಿ ತಂತ್ರಜ್ಞಾನದ ಮಾಹಿತಿ ಹಾಗೂ ಯೋಜನೆಗಳ ಕುರಿತು ರೈತರಿಗೆ ಮಾಹಿತಿ ತಲುಪಿಸಲು ಕೃಷಿ ಸಖಿಯರಿಗೆ ಇತ್ತಿಚೀನ ಕೃಷಿ ತಂತ್ರಜ್ಞಾನಗಳ ಕುರಿತು ತರಬೇತಿ ನೀಡಲಾಗುತ್ತಿದೆ. ಶಿಬಿರಾರ್ಥಿಗಳು ತರಬೇತಿ ನಂತರದಲ್ಲಿ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡುವುದರ ಮೂಲಕ ಕೃಷಿ ಪರಿಸರ ವ್ಯವಸ್ಥೆಯ ಆದಾಯವನ್ನು ಅಧಿಕಗೊಳಿಸಲು ಶ್ರಮಿಸಬೇಕೆಂದು ಸಲಹೆ ನೀಡಿದರು.
ಕೇಂದ್ರದ ಮಣ್ಣು ವಿಜ್ಞಾನಿ ಎಸ್. ಎಮ್. ವಾರದ ಕಾರ್ಯಕ್ರಮದಲ್ಲಿ ಸ್ವಾಗತಿಸಿ ಹಾಗೂ ಪ್ರಾಸ್ತಾವಿಕ ಮಾತನಾಡಿ, ಕೃಷಿ ಸಖಿಯರು ರೈತರು ಮತ್ತು ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸುವರು. ಈ ನಿಟ್ಟಿನಲ್ಲಿ ಅವರ ತಾಂತ್ರಿಕ ಸಾಮರ್ಥ್ಯವನ್ನು ಬಲಪಡಿಸಲು ಅನೇಕ ಮುಂದುವರೆದ ಕೃಷಿ ತಾಂತ್ರಿಕತೆಗಳ ಕುರಿತು ತರಬೇತಿ ನಡೆಸಲಾಗುತ್ತಿದೆ. ಕೇಂದ್ರದ ವಿಜ್ಞಾನಿಗಳು ಹಾಗೂ ಕೃಷಿ/ತೋಟಗಾರಿಕೆ ವಿಶ್ವವಿದ್ಯಾಲಯದ ವಿಜ್ಞಾನಿಗಳು ಕೃಷಿ ಉತ್ಪಾದನೆ ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಪೂರಕವಾದ ತಂತ್ರಜ್ಞಾನಗಳನ್ನು ಮನವರಿಕೆ ಮಾಡುತ್ತಾರೆ ಎಂದರು. ಕಾರ್ಯಕ್ರಮದಲ್ಲಿ ಕೇಂದ್ರದ ವಿಜ್ಞಾನಿ ಡಾ. ಎಸ್. ಎಸ್. ಹಿರೇಮಠ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 