ರುಡ್ಸೆಟ್ನಲ್ಲಿ ಕೃಷಿ ಉದ್ಯಮ ಹಾಗೂ ಎಲೆಕ್ಟ್ರಿಕಲ್ ತರಬೇತಿ ಶಿಬಿರ ಉದ್ಘಾಟನೆ
Inauguration of training camps on agri-entrepreneurship and electrical work at RUDSET
ಧಾರವಾಡ, ಆ.6: ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ, ಬೇಸಾಯ ಪದ್ಧತಿ, ಯಾಂತ್ರೀಕರಣ ಹಾಗೂ ಮಾರುಕಟ್ಟೆ ವ್ಯವಸ್ಥೆಯಲ್ಲಿ ನಿರಂತರ ಬದಲಾವಣೆಗಳು ಆಗುತ್ತಿದ್ದು, ರೈತರು ಕಾಲಕ್ಕೆ ತಕ್ಕಂತೆ ಹೊಸ ತಂತ್ರಜ್ಞಾನ ಅಳವಡಿಸಿಕೊಂಡರೆ ಮಾತ್ರ ಕೃಷಿಯಲ್ಲಿ ಯಶಸ್ಸು ಮತ್ತು ಹೆಚ್ಚಿನ ಆದಾಯ ಗಳಿಸಲು ಸಾಧ್ಯ ಎಂದು ಕರ್ನಾಟಕ ಸರ್ಕಾರದ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ. ಅಶೋಕ್ ದಳವಾಯಿ ಹೇಳಿದರು.
ನಗರದ ಗಾಂಧಿನಗರದಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ಆಯೋಜಿಸಿದ್ದ ಕೃಷಿ ಉದ್ಯಮ, ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ಹಾಗೂ ಪಂಪ್ಸೆಟ್ ದುರಸ್ತಿ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಂದು ಕಾಲದಲ್ಲಿ ತಂತ್ರಜ್ಞಾನ ಬದಲಾವಣೆ ಹಲವು ವರ್ಷಗಳಿಗೊಮ್ಮೆ ಆಗುತ್ತಿತ್ತು. ಆದರೆ ಇಂದು ಪ್ರತಿವರ್ಷ ಹೊಸ ತಂತ್ರಜ್ಞಾನಗಳು ಪರಿಚಯವಾಗುತ್ತಿವೆ. ಅವುಗಳ ಬಗ್ಗೆ ನಿರಂತರವಾಗಿ ಕಲಿತು ಕೌಶಲ್ಯ ಬೆಳೆಸಿಕೊಂಡಾಗ ಮಾತ್ರ ಉದ್ಯೋಗ ಮತ್ತು ಕೃಷಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಯಾವುದೇ ಕ್ಷೇತ್ರದಲ್ಲಿ ಶ್ರದ್ಧೆ, ನಿಷ್ಠೆ ಹಾಗೂ ಕೌಶಲ್ಯದೊಂದಿಗೆ ಕಾರ್ಯನಿರ್ವಹಿಸಿದರೆ ಸ್ಥಿರವಾದ ಯಶಸ್ಸು ದೊರೆಯುತ್ತದೆ. ತರಬೇತಿಯ ಮೂಲಕ ದೊರೆಯುವ ಜ್ಞಾನವನ್ನು ಕೃಷಿ ಮತ್ತು ಉದ್ಯಮದಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿಗಳಾದ ಡಾ. ವಿ.ಎಂ. ಬೆಣಗಿ, ಡಾ. ಶೋಭಾ ನಾಗನೂರ, ಗೋಪಾಲ ಬಂಡಿವಾಡ, ಡಾ. ಆರಿ್ಬ. ಹಿರೇಮಠ ಹಾಗೂ ಕೃಷ್ಣ ಜಹಗೀರದಾರ್ ಉಪಸ್ಥಿತರಿದ್ದರು.
ಅಧ್ಯಕ್ಷತೆ ವಹಿಸಿದ್ದ ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಪೃಥ್ವಿರಾಜ್ ಜಿ.ಪಿ. ಮಾತನಾಡಿ, ಸಂಸ್ಥೆಯು ಕೃಷಿಗೆ ಪೂರಕವಾದ ಹಲವು ಸ್ವಯಂ ಉದ್ಯೋಗ ತರಬೇತಿಗಳನ್ನು ನೀಡುತ್ತಿದ್ದು, ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆ ಸೇರಿದಂತೆ ವಿವಿಧ ಕೃಷಿ ಆಧಾರಿತ ತರಬೇತಿಗಳನ್ನು ಆಯೋಜಿಸುತ್ತಿದೆ. ತರಬೇತಿಯಲ್ಲಿ ಕಲಿಯುವ ಮಾಹಿತಿಯನ್ನು ರೈತರು ತಮ್ಮ ಕೃಷಿ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಉಪನ್ಯಾಸಕ ಜಗದೀಶ್ ಸಿ. ಪೂಜಾರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಿಬ್ಬಂದಿಗಳಾದ ನಾಗರಾಜ ಎಸ್.ಬಿ., ಮಧುರಾಜ ಭಟ್ ಹಾಗೂ ಮಹೇಶ್ ಗೌಡ ಉಪಸ್ಥಿತರಿದ್ದರು. ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ ಹಾಗೂ ಶಿವಮೊಗ್ಗ ಜಿಲ್ಲೆಗಳ ಸುಮಾರು 70 ರೈತರು ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 