ಸಂಯುಕ್ತ ಅರಬ್ ರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5365 ಕ್ಕೆ ಏರಿಕೆ

ದೋಹಾ, ಏ 16,ಸಂಯುಕ್ತ ಅರಬ್ ಒಕ್ಕೂಟ ಯುಎಇ ನಲ್ಲಿ ಕಳೆದ 24 ಗಂಟೆಗಳಲ್ಲಿ 432 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 5365 ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ರಾಷ್ಟ್ರೀಯ ಆರೋಗ್ಯ ಸಚಿವಾಲಯ ತಿಳಿಸಿದೆ.ವಿವಿಧ ದೇಶಗಳ 432 ಪ್ರಜೆಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಅವರನ್ನು ವೈದ್ಯಕೀಯ ನಿಗಾದಲ್ಲಿಡಲಾಗಿದೆ ಎಂದು ಸಚಿವಾಲಯ ಹೇಳಿದೆ. ಈವರೆಗೆ 5365 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು 1034 ಜನರು ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ಟ್ವೀಟ್ ಮಾಡಿದೆ.ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 33 ಕ್ಕೆ ಏರಿಕೆಯಾಗಿದೆ. ಮಾರ್ಚ್ 11 ರಂದು ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ಕೋವಿಡ್ 19 ಅನ್ನು ಸಾಂಕ್ರಾಮಿಕ ಎಂದು ಘೋಷಿತ್ತು. ಈವರೆಗೆ ಜಗತ್ತಿನಾದ್ಯಂತ 20 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು 133000 ಜನರು ಮೃತಪಟ್ಟಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.