ರೈತರನ್ನು ಐಸಿಸಿ ಸಮಿತಿಗೆ ಸೇರಿಸಿ: ಅಖಂಡ ಕರ್ನಾಟಕ ರೈತ ಸಂಘ ಆಗ್ರಹ
Include farmers in the ICC committee: Akhanda Karnataka Raitha Sangha demands
ಲೋಕದರ್ಶನ ವರದಿ
ವಿಜಯಪುರ 25: ಆಲಮಟ್ಟಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಬಿಡುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗಳಿಗೆ ಸಮರ್ಕ ಪ್ರಮಾಣದಲ್ಲಿ ನೀರು ಒದಗಿಸಬೇಕು.
ಜೊತೆಗೆ ಐಸಿಸಿ ಸಮಿತಿಯಲ್ಲಿ ರೈತರಿಗೆ ಪ್ರತಿನಿಧಿತ್ವ ನೀಡಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘ ಆಗ್ರಹಿಸಿದೆ. ಈ ಕುರಿತು ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಸಿದ್ದಾಪೂರ ಮಾತನಾಡಿ, ಇದುವರೆಗೆ ಐಸಿಸಿ ಸಮಿತಿ ರಚನೆಯಾಗಿಲ್ಲ. ಈಗ ಸರ್ಕಾರ ಸಮಿತಿ ರಚಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಕಡ್ಡಾಯವಾಗಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಬೆಳೆಗಳ ಸ್ವರೂಪ, ನೀರಿನ ಅವಶ್ಯಕತೆ ಹಾಗೂ ನೀರು ಬಿಡುವ ಅವಧಿಯ ಬಗ್ಗೆ ರೈತರಿಗೆ ಸಮಗ್ರ ಅನುಭವವಿರುವುದರಿಂದ ಐಸಿಸಿ ಸಮಿತಿಯಲ್ಲಿ ಅವರ ಪ್ರತಿನಿಧಿತ್ವ ಅತ್ಯಗತ್ಯವಾಗಿದೆ. ರೈತರ ಅಭಿಪ್ರಾಯದ ಆಧಾರದ ಮೇಲೆ ನೀರಿನ ಹಂಚಿಕೆ ಮಾಡಿದರೆ ಬೆಳೆಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸಾವಿರಾರು ರೈತರು ನೀರಾವರಿ ಯೋಜನೆಗಾಗಿ ತಮ್ಮ ಭೂಮಿಯನ್ನು ತ್ಯಾಗ ಮಾಡಿದ್ದಾರೆ. ಹೀಗಾಗಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅಗತ್ಯ ಪ್ರಮಾಣದಲ್ಲಿ ನೀರು ಪೂರೈಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ತಿಳಿಸಿದರು.
ನೀರಾವರಿ ಕಾಲುವೆಗಳ ಕೊನೆಯ ಭಾಗದ (ಟೇಲ್-ಎಂಡ್) ರೈತರಿಗೂ ಸಮರ್ಕವಾಗಿ ನೀರು ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಯಾವುದೇ ರೈತನಿಗೆ ನೀರಾವರಿ ಸೌಲಭ್ಯದಿಂದ ವಂಚನೆಯಾಗಬಾರದು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಎಚ್.ಟಿ. ಭರತಕುಮಾರ, ಭೋಗೇಶ್ ಸೋಲಾಪುರ, ಗೈಬೂಸಾಬ್ ಬಂಡರಗೋಠೆ, ಗುರುರಾಜ ಪಡಶೆಟ್ಟಿ, ಪಾಂಡು ಹಟ್ಟಿ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಗೂ ಅಚ್ಚುಕಟ್ಟು ಪ್ರದೇಶದ ರೈತರು ಉಪಸ್ಥಿತರಿದ್ದರು.
ಪತ್ರಕರ್ತರ ಸೋಗಿನಲ್ಲಿ ಬಂದು 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ 