ಉತ್ತಮ ಆಹಾರ ಸೇವನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚಳ

ಬಳ್ಳಾರಿ,ಜೂ 06: ಸಾಮಾಜಿಕ ಪಿಡುಗುಗಳಾದ ಕಾಲರಾ, ಪ್ಲೇಗ್ ಇತರೆ ಮಹಾಮಾರಿಗಳು ಹಿಂದಿನ ಕಾಲದಲ್ಲಿ ಸಾಮಾಜಿಕ ಪಿಡುಗುಗಳಾಗಿ ಜಗತ್ತನ್ನೇ ಬಾಧಿಸಿವೆ. ಇಂದು ಕೋವಿಡ್-19 ಕೊರೊನಾ ವೈರಸ್ ಜಗತ್ತನ್ನೇ ತಲ್ಲಣಗೊಳಿಸಿದೆ. ಇಂಥ ಸಂದರ್ಭದಲ್ಲಿಯೂ ಕೂಡ  ನಾವು ಜೀವನ ಕಟ್ಟಿಕೊಳ್ಳಬೇಕಾಗಿದೆ. ಮುಖ್ಯವಾಗಿ ಎಲ್ಲರನ್ನು ಅನುಮಾನದ ದೃಷ್ಟಿಯಿಂದ ನೋಡುವ ಪರಿಸ್ಥಿತಿ ನಿಮರ್ಾಣವಾಗಿರುವುದು ನೋವಿನ ಸಂಗತಿ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಸ.ಚಿ.ರಮೇಶ ಅವರು ವಿಷಾದ ವ್ಯಕ್ತಪಡಿಸಿದರು.  

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಕಟ್ಟಡದಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ಶನಿವಾರ ಸಾಂಕ್ರಾಮಿಕ ರೋಗ ಕೋವಿಡ್-19 ಅರಿವಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಮ್ಮ ಕುಟುಂಬದ ಸದಸ್ಯರ ಜೊತೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ದುಸ್ಥಿತಿ ಬಂದಿದೆ. ಇಂದು ನಾವು ಸಾಮಾಜಿಕ ಅಂತರದ ಅಗತ್ಯ ಎಷ್ಟು ಮುಖ್ಯವಾಗಿದೆ ಎಂದು ತಿಳಿದು ನಮ್ಮ ಕುಟುಂಬದ ಜೊತೆಗೆ ಜಗತ್ತನ್ನೇ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರದ್ದು. ಪ್ರತಿನಿತ್ಯ ಯೋಗ, ಧ್ಯಾನ, ಶ್ರಮದಾನದ ಜೊತೆಗೆ ಉತ್ತಮ ಆಹಾರವನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದೆಂದು ವಿಶ್ವವಿದ್ಯಾಲಯದ ಸಿಬ್ಬಂದಿಗಳಿಗೆ ಸಲಹೆ ನೀಡಿದರು.

ಕನ್ನಡ ವಿಶ್ವವಿದ್ಯಾಲಯದ ವೈದ್ಯರಾದ ಡಾ. ಸಂಪತ್ಕುಮಾರ್ ತೆಗ್ಗಿ ಅವರು ಕೋವಿಡ್-19 ಆರೋಗ್ಯದ ಮುನ್ನೆಚ್ಚರಿಕೆಗಳು ಎನ್ನುವ ವಿಶೇಷ ಉಪನ್ಯಾಸ ನೀಡಿ ಸ್ವಯಂ ರಕ್ಷಣೆ ನಮ್ಮೆಲ್ಲರ ಹೊಣೆ. ನಾವು ಹೆಚ್ಚಿನ ರೀತಿಯಲ್ಲಿ ಸುರಕ್ಷಿತ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ಇನ್ನು ವಿಶ್ವವಿದ್ಯಾಲಯದ ಸಿಬ್ಬಂದಿಗಳ ಜೊತೆ ಕೋವಿಡ್-19 ಕುರಿತಂತೆ ಸಂವಾದ ನಡೆಸಿ ಅನೇಕ ಪ್ರಶ್ನೆಗಳಿಗೆ ಸೂಕ್ತ ಸಲಹೆ ನೀಡಿದರು. 

       ಆಂತರಿಕ ಗುಣಮಟ್ಟ ಭರವಸೆ ಕೋಶದ ನಿದರ್ೆಶಕರಾದ ಡಾ. ಎ. ಮೋಹನ ಕುಂಟಾರ್ ಅವರು ಮಾತನಾಡಿ ವಿಶ್ವವಿದ್ಯಾಲಯಗಳಲ್ಲಿ ಹಿಂದೆ ಅನೇಕ ಶೈಕ್ಷಣಿಕ ವಿಷಯಗಳಿಗೆ ಸಂಬಂಧಪಟ್ಟಂತೆ, ಕಾಯರ್ಾಗಾರ, ವಿಶೇಷ ಉಪನ್ಯಾಸ, ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಲಾಗುತ್ತಿತ್ತು. ಆದರೆ ಈ ಆರೋಗ್ಯದ ತುತರ್ು ಪರಿಸ್ಥಿತಿ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯವು ಆಂತರಿಕ ಗುಣಮಟ್ಟ ಭರವಸೆ ಕೋಶದಿಂದ ವಿಶ್ವವಿದ್ಯಾಲಯದ ಎಲ್ಲಾ ಸಿಬ್ಬಂದಿಗಳ ಆರೋಗ್ಯದ ಕಾಳಜಿ ವಹಿಸಿ ಆರೋಗ್ಯದ ಕುರಿತು ವಿಶೇಷ ಉಪನ್ಯಾಸವನ್ನು ಇಂದು ಹಮ್ಮಿಕೊಳ್ಳಲಾಗಿದೆ. ಇದರಿಂದ ವಿಶ್ವವಿದ್ಯಾಲಯದ ಸಿಬ್ಬಂದಿಗಳು ವೈಯಕ್ತಿಕ, ಕುಟುಂಬ ಹಾಗೂ ಕಛೇರಿಯ ಹಿತದೃಷ್ಟಿಯಿಂದ ಸೂಕ್ತ ರೀತಿಯಾಗಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಶುಚಿತ್ವವಾಗಿ ಕಾರ್ಯನಿರ್ವಹಿಸಿದರೆ ಎಲ್ಲರೂ ಕೂಡ ಉತ್ತಮ ಆರೋಗ್ಯದಿಂದ ಜೀವನ ಸಾಗಿಸಬಹುದೆಂದು ತಿಳಿಸಿದರು. 

     ಈ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಎ. ಸುಬ್ಬಣ್ಣ ರೈ   ಸಹಾಯಕ ನಿದರ್ೆಶಕರಾದ ಡಿ. ಪ್ರಭ, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಐಕ್ಯೂಎಸಿ ವಿಭಾಗದ ಸಿಬ್ಬಂದಿಗಳು ಮತ್ತು ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಇನ್ನೀತರರು ಇದ್ದರು.

ಆಶಾ ಕಾರ್ಯಕರ್ತರಿಗೆ ಉಚಿತ ಔಷಧಿ ವಿತರಣೆ