ನವದೆಹಲಿ, ಮೇ 30, ವಿಶ್ವದಲ್ಲಿ ಕೊರೊನಾ ವೈರಸ್ ಸೋಂಕು ವೇಗವಾಗಿ ಹಬ್ಬುತ್ತಿದೆ. ಮೆಕ್ಸಿಕೊದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ನಿಂದಾಗಿ 371 ಜನರ ಸಾವಿನ್ನಪ್ಪಿದ್ದಾರೆ. ಅರ್ಜೆಂಟೀನಾದಲ್ಲಿ ಶುಕ್ರವಾರ 717 ಹೊಸ ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗಿದ್ದಾರೆ. ಮೆಕ್ಸಿಕೊದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 9415 ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಹ್ಯೂಗೋ ಲೋಪೆಜ್-ಗ್ಯಾಟೆಲ್ ಈ ಮಾಹಿತಿ ನೀಡಿದರು. ಈ ಅವಧಿಯಲ್ಲಿ, 3,227 ರಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಸೋಂಕಿತರ ಸಂಖ್ಯೆ ದೇಶದಲ್ಲಿ 84,627 ಕ್ಕೆ ಏರಿದೆ ಎಂದು ಅವರು ಹೇಳಿದರು.ಅರ್ಜೆಂಟೀನಾದಲ್ಲೂ ಈ ಮಹಾಮಾರಿಗೆ ಜನ ನಲುಗಿದ್ದಾರೆ. ಒಂದೇ ದಿನ 717 ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 15,419ಕ್ಕೆ ಏರಿಕೆ ಆಗಿದ್ದು, 520 ಜನ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್ 11 ರಂದು ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ವೈರಸ್ ಅನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿತ್ತು.