ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಸಂಸದೆ ಪ್ರೀಯಾಂಕಾ ಜಾರಕಿಹೊಳಿ
Increased funds for infrastructure development: MP Priyanka Jarkiholi
ಲೋಕದರ್ಶನ ವರದಿ
ಕಾಗವಾಡ 16: ಮತಕ್ಷೇತ್ರದ ರಸ್ತೆ, ಕುಡಿಯುವ ನೀರು, ಶಾಲಾ ಕಟ್ಟಡ, ಗಟಾರು ನಿರ್ಮಾಣದಂತಹ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ, ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವುದಾಗಿ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಅವರು ಗುರುವಾರ ದಿ. 16 ರಂದು ಐನಾಪೂರ ಪಟ್ಟಣದ ಇಂದಿರಾನಗರ ಬಡಾವಣೆಯಲ್ಲಿ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ 50 ಲಕ್ಷ ರೂ. ಅನುದಾನದ ಸಿಸಿ ರಸ್ತೆ ಹಾಗೂ ಗಟಾರು ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
ಕಾಂಗ್ರೆಸ್ ಪಕ್ಷವು ಜನರ ಪರವಾಗಿ ಕೆಲಸ ಮಾಡುತ್ತಿದ್ದು, ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಜನರಿಗೆ ಲಾಭವಾಗಿದೆ. ಇದನ್ನು ಇದೇ ರೀತಿ ಮುಂದುವರಿಸಿಕೊಂಡು ಹೋಗುತ್ತೇವೆ. ಡಾ. ಅಂಬೇಡ್ಕರ್ ಅವರು ಎಲ್ಲರಿಗೂ ಸಮಾನ ಹಕ್ಕು ನೀಡಿದ್ದಾರೆ. ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ, ಸಮಾಜದ ಮುಖ್ಯ ವಾಹಿನಿಗೆ ತರಬೇಕೆಂದು ಎಸ್‌ಸಿ ಎಸ್‌ಟಿ ಸಮುದಾಯದವರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ರಮೇಶ ಸಿಂದಗಿ, ಮುಖ್ಯಾಧಿಕಾರಿ ಮಹಾಂತೇಶ ಕೌಲಾಪುರೆ, ಸಚೀನ ಬುಟಾಳಿ, ಉಮೇಶ ಪಾಟೀಲ, ಸುದರ್ಶನ ಜಂತನ್ನವರ, ಸುರೇಶ ಗಾಣಿಗೇರ, ದಾದಾ ಜಂತಣ್ಣವರ, ಅಭಿಯಂತರರಾದ ಸದಾಶಿವ ಗುರವ, ವೀರೇಶ ಬಿಸ್ತಗೌಡ, ಗುತ್ತಿಗೆದಾರ ಸಿದ್ದಾರೂಡ ನ್ಯಾಮಗೌಡ, ಶುಭಂ ಪಾಟೀಲ, ರಮೇಶ ಪೂಜಾರಿ, ಪರಶುರಾಮ ನಾಯಕ ಸಹದೇವ ನಾಯಕ, ಉದಯ ನಾಯಕ, ಹನುಮಂತ ನಾಯಕ, ಸತ್ಯಪ್ಪ ನಾಯಕ ಸೇರಿದಂತೆ ಅನೇಕ ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 