7 ವರ್ಷಗಳಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿದ ಚಿನ್ನದ ಬೆಲೆ
ನವದೆಹಲಿ , ಏ 10, ಜಗತ್ತಿನಾದ್ಯಂತ ಕೊರೋನ ಹಾವಳಿ ಮತ್ತಷ್ಟು ಹೆಚ್ಚಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಕಳೆದ ಏಳು ವರ್ಷಗಳಲ್ಲೇ ಅತ್ಯಂತ ಎತ್ತರಕ್ಕೆ ಹೋಗಿದೆ .ಸುರಕ್ಷಿತ ಹೂಡಿಕೆಯಾದ ಚಿನ್ನದ ಮೇಲೆ ಹೂಡಿಕೆದಾರರು ಹೆಚ್ಚಿನ ಒಲವು ತೋರುತ್ತಿದ್ದಾರೆ.ವಿಶ್ವದ ಆರ್ಥಿಕತೆಯು ಕರೋನದಿಂದ ಅತ್ಯಂತ ಸಂಕಷ್ಟಕ್ಕೆ ಸಿಲುಕಿದ್ದು, ಆರ್ಥಿಕ ಹಿಂಜರಿತವನ್ನು ಪ್ರವೇಶಿಸಿದೆ. ಹೀಗಾಗಿ ಸುರಕ್ಷಿತ ಹೂಡಿಕೆಯಾದ ಚಿನ್ನದ ಮೇಲೆ ಹೂಡಿಕೆದಾರರು ಒಲವು ತೋರುತ್ತಿದ್ದಾರೆ.
ಅಮೆರಿಕಾದಲ್ಲಿ ಎದುರಾಗಿರುವ ನಿರುದ್ಯೋಗ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅಮೆರಿಕ ಸ್ ಫೆಡರಲ್ ರಿಸರ್ವ್ ಬ್ಯಾಂಕ್ ಅನೇಕ ವ್ಯಾಪಕ, ಮಹತ್ವದ ನಿರ್ಧಾರಗಳನ್ನು ತೆಗದುಕೊಂಡಿದೆ. ಹೀಗಾಗಿ ಚಿನ್ನವು ಕಳೆದ ಏಳು ವರ್ಷಗಳ ಗರಿಷ್ಠ ಮಟ್ಟವನ್ನು ತಲುಪಿದೆ. ಯುಎಸ್ ಫೆಡರಲ್ 2.3 ಟ್ರಿಲಿಯನ್ ಡಾಲರ್ ಅನ್ನು ಹೆಚ್ಚುವರಿ ಸಹಾಯವಾಗಿ ಗುರುವಾರ ಘೋಷಿಸಿದೆ. ಕೊರೊನಾ ಲಾಕ್ಡೌನ್ನಿಂದಾಗಿ ಅಮೆರಿಕಾದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಹೆಚ್ಚುತ್ತಿದ್ದು, ಸತತ ಮೂರನೆ ವಾರವು ನಿರುದ್ಯೋಗದ ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ ಎಂದೂ ವರದಿಯಾಗಿದೆ. ನ್ಯೂಯಾರ್ಕ್ ಕಾಮೆಕ್ಸ್ನಲ್ಲಿ ಚಿನ್ನದ ಬೆಲೆಯು ಶೇಕಡ4.1 ಪರ್ಸೆಂಟ್ ಏರಿಕೆಯಾಗಿ 1,752 ಡಾಲರ್ ಗೆ ತಲುಪಿದೆ.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 