ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ: ತುರ್ತು ಸಭೆ ಕರೆದ ಮುಖ್ಯಮಂತ್ರಿ

ಬೆಂಗಳೂರು, ಜೂನ್ 22, ಬೆಂಗಳೂರಿನಲ್ಲಿ ತೀವ್ರಗತಿಯಲ್ಲಿ ಹರಡುತ್ತಿರುವ ಕೊರೊನಾ   ಸೋಂಕು ಹಿನ್ನೆಲೆಯಲ್ಲಿ  ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ.ಮಧ್ಯಾಹ್ನ 12ಕ್ಕೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿದ್ದು, ಸಚಿವರು, ಬಿಬಿಎಂಪಿ ಮೇಯರ್, ಆರೋಗ್ಯ ಅಧಿಕಾರಿಗಳು, ಆರೋಗ್ಯ ಸಚಿವರು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಗೆಕೊರೊನಾ ವೈರಸ್ ನಿಯಂತ್ರಿಸಲು ರೂಪುರೇಷೆ ಸಿದ್ಧಪಡಿಸಿಕೊಂಡು ಬರುವಂತೆ ಸೂಚನೆ ನೀಡಿದ್ದಾರೆ.ಬೆಂಗಳೂರಿನಲ್ಲಿ  ಭಾನುವಾರ 195, ಶನಿವಾರ 94 ಜನರಲ್ಲಿ ಕೊರೊನಾ ವೈರಸ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ  ದಿನದಿಂದ ದಿನಕ್ಕೆ ಉಲ್ಭಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ದಿಢೀರ್ ಸಭೆ  ಕರೆಯಲಾಗಿದೆ.