ಬಳ್ಳಾರಿ20: ತುಂಗಾಭದ್ರಾ ಜಲಾಶಯದ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಇನ್ಮುಂದೆ ಯಾವುದೇ ಕ್ಷಣದಲ್ಲಾದರೂ 50 ಸಾವಿರ ಕ್ಯೂಸೆಕ್ನಿಂದ 1.50ಲಕ್ಷ ಕ್ಯೂಸೆಕ್ವರೆಗೆ ನೀರನ್ನು ನದಿಗೆ ಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.
ನದಿಪಾತ್ರದ ಜನರಿಗೆ ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿರುವ ಡಿಸಿ ರಾಮ್ ಪ್ರಸಾತ್ ಅವರು, ಈ ಬಗ್ಗೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಅವರು ತಿಳಿಸಿದ್ದಾರೆ.
ನದಿಪಾತ್ರಕ್ಕೆ ಒಳಪಡುವ ಎಲ್ಲ ತಹಸೀಲ್ದಾರರು ಮತ್ತು ತಾಪಂ ಕಾರ್ಯನಿವರ್ಾಹಕ ಅಧಿಕಾರಿಗಳಿಗೆ ಗುರುವಾರ ಮತ್ತೇ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹೊಸಪೇಟೆ, ಕಂಪ್ಲಿ ಮತ್ತು ಸಿರಗುಪ್ಪ ತಾಲೂಕುಗಳ ತಹಸೀಲ್ದಾರರು ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಜನರಿಗೆ ತಿಳಿಸುವುದರ ಜತೆಗೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ.