ವಿಜಯಪುರ ಸಂಪೂರ್ಣ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ

ವಿಜಯಪುರ ಸಂಪೂರ್ಣ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ  Indefinite protest demanding the declaration of a full-fledged drought in Vijayapura


ವಿಜಯಪುರ 02 : ಜಿಲ್ಲೆಯ 13 ತಾಲೂಕುಗಳನ್ನೂ ಬರಗಾಲ ಪೀಡಿತವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಆರಂಭಿಸಲಾಯಿತು. ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದ ರೈತರು, ಬಳಿಕ ಟೆಂಟ್ ಹಾಕಿ ಹೋರಾಟ ಆರಂಭಿಸಿದರು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ಪ್ರತಿ ಎಕರೆಗೆ 50 ಸಾವಿರ ಬರ ಪರಿಹಾರ, ಬೆಳೆ ವಿಮೆ ಪಾವತಿಸಿರುವ ರೈತರಿಗೆ ಶೇ.50ರಷ್ಟು ಮಧ್ಯಂತರ ವಿಮೆ ಬಿಡುಗಡೆ, ಹಳ್ಳ-ಕೊಳ್ಳ, ಕೆರೆ-ಕಾಲುವೆಗಳನ್ನು ಭರ್ತಿ ಮಾಡುವುದು, ಜಾನುವಾರುಗಳಿಗೆ ಮೇವು ಹಾಗೂ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವಂತೆ ಒತ್ತಾಯಿಸಿದರು. ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಸ ಲಾಗುವುದು. ಜಿಲ್ಲೆಯನ್ನು ಬರಗಾಲ ಪೀಡಿತವೆಂದು ಘೋಷಿಸದಿದ್ದರೆ ಜಿಲ್ಲೆಯ ಎಲ್ಲಾ ಎಂಟು ಶಾಸಕರು ರಾಜೀನಾಮೆ ನೀಡಿ ರೈತರ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮುಖಂಡರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಗಮೇಶ ಸಗರ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.