ಸ್ವಾತಂತ್ರ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಪುರಸಭೆ ಮುಖ್ಯಾಧಿಕಾರಿ
Independence Day: Municipal Chief Officer performs flag hoisting
ಲೋಕದರ್ಶನ ವರದಿ
ಲಕ್ಷ್ಮೇಶ್ವರ, ಆ.16: ಪಟ್ಟಣದ ಪುರಸಭೆಯಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸಿ, ಅವರು ನೀಡಿದ ಸ್ವಾತಂತ್ರ್ಯದ ಹಾದಿಯಲ್ಲಿ ಎಲ್ಲರೂ ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ವೇಳೆ ಪುರಸಭೆಗೆ ಬಂದಿರುವ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪುರಸಭೆ ಉಮಾವಿದ್ಯಾಲಯ ಹೈಸ್ಕೂಲ್ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರನ್ನು ಹಾಗೂ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪುರಸಭೆಯ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ ಮದುಗಲ್ಲ, ಮ್ಯಾನೇಜರ್ ಮಂಜುಳಾ ಹೂಗಾರ, ನೇತ್ರಾ ಹೊಸಮನಿ, ಸುರೇಶ್ ಪೂಜಾರ, ಹನುಮಂತಪ್ಪ ನಂದಣ್ಣವರ, ಮಹೇಶ್ ಹೊಸಮನಿ, ಸಿದ್ದಪ್ಪ ಪೂಜಾರ, ಆಂಜನೇಯ ರಾಠೋಡ್ ಸೇರಿದಂತೆ ಪುರಸಭೆಯ ಎಲ್ಲ ವಿಭಾಗಗಳ ಸಿಬ್ಬಂದಿ, ಹಿರಿಯ ಮುಖಂಡರು, ಉಮಾವಿದ್ಯಾಲಯ ಶಾಲಾ ವಿದ್ಯಾರ್ಥಿಗಳು ಹಾಗೂ ಪೌರಕಾರ್ಮಿಕರು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 