ಮಹಾನಂದಿ ಕೊಟ್ಟಂ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಹಾನಂದಿ ಕೊಟ್ಟಂ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ  Independence Day Celebration at Mahanandi Kottam School


ಬಳ್ಳಾರಿ, ಆ.16: ನಗರದ ತಾಳೂರು ರಸ್ತೆಯ 23ನೇ ವಾರ್ಡ್ನ ಮಹಾನಂದಿ ಕೊಟ್ಟಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಸಿದ್ದಲಿಂಗಮ್ಮ ಎಲ್‌. ಧ್ವಜಾರೋಹಣ ನೆರವೇರಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ವಿದ್ಯಾರ್ಥಿಗಳು ಅರಿತು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು. ಎಸ್ಡಿಎಂಸಿ ಅಧ್ಯಕ್ಷ ಉಪೇಂದ್ರ ಹಾಗೂ ಹಿರಿಯ ಸಾಹಿತಿ ಎನ್‌.ಡಿ. ವೆಂಕಮ್ಮ ಮಾತನಾಡಿ, ವಿದ್ಯಾರ್ಥಿಗಳು ದೇಶಭಕ್ತಿ, ಶಿಸ್ತು, ಮಾನವೀಯತೆ ಮತ್ತು ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.  ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಎಸ್ಡಿಎಂಸಿ ಸದಸ್ಯರು ಹಾಗೂ ಶಿಕ್ಷಣ ಪ್ರೇಮಿಗಳು ಉಪಸ್ಥಿತರಿದ್ದರು.