ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ  Independence Day celebration at the Department of Information and Public Relations office


ಬಳ್ಳಾರಿ, ಆ.16: ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಆವರಣದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.  

ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ. ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.  

ಕಾರ್ಯಕ್ರಮದಲ್ಲಿ ವಾರ್ತಾ ಸಹಾಯಕ ವಿ.ಸಿ. ಗುರುರಾಜ್, ಪ್ರ.ದ.ಸ. ನವೀನ್ ಕುಮಾರ್ ಜಿ. ಹಾಗೂ ಸಿಬ್ಬಂದಿಗಳಾದ ಹನುಮೇಶ್ ಎಚ್‌., ವಿಜಯ್ ಕುಮಾರ್, ಮಲ್ಲೇಶ್, ಹನುಮಂತಪ್ಪ, ರೋಜಮೇರಿ ಮತ್ತು ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.