ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
Independence Day celebrations at Budihala Government High School
ಬೈಲಹೊಂಗಲ 16: ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಅಚರಿಸಲಾಯಿತು. ಧ್ವಜಾರೋಹಣದ ನಂತರ ಗ್ರಾಮದಲ್ಲಿ ನಡೆದ ಪ್ರಭಾತಪೇರಿಯಲ್ಲಿ ವಿವಿಧ ಸ್ವಾತಂತ್ರ್ಯ ಹೋರಾಟಗಾರರ ವೇಷದಲ್ಲಿನ ಮಕ್ಕಳು ಎಲ್ಲರ ಗಮನ ಸೆಳೆದರು.
ಗ್ರಾಮದ ಮಾಜಿ ಯೋಧರಾದ ವಿ.ಬಿ ಬಡಿಗೇರ, ಅರ್ಜುನ ನಿಂಬಾಳ್ಕರ, ಗಂಗಪ್ಪ ಅರವಟಗಿ, ಹನಮಂತಪ್ಪ ಯರಗೊಪ್ಪ ಮತ್ತು ಹಾಲಿ ಸೈನಿಕರಾದ ಗುರುಶಾಂತಯ್ಯ ಕುಲಕರ್ಣಿ, ಮಲಿಕ್ ಜಾನ್ ವಕ್ಕುಂದ, ಅದೃಶ ಕಂಬಳಿ ಭಾಗಿಯಾಗಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯಶಿಕ್ಷಕರಾದ ಎನ್.ಆರ್. ಠಕ್ಕಾಯಿ ಮಾತನಾಡಿ ಮಕ್ಕಳು ಉತ್ತಮ ಶಿಕ್ಷಣ ಪಡೆದು ಶ್ರೇಷ್ಠ ಸಾಧನೆ ಮಾಡಿ ದೇಶದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಬೇಕು ಎಂದರು.
ತಮ್ಮ ಜೀವದ ಹಂಗು ತೊರೆದು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ಸ್ಮರಿಸಬೇಕು ಎಂದು ಅವರು ಹೇಳಿದರು. ಎಸ್.ಡಿ.ಎಂ.ಸಿ ಸದಸ್ಯರಾದ ರಾಮಲಿಂಗಪ್ಪ ಮೆಕ್ಕೇದ ಮಾತನಾಡಿ ನಮ್ಮ ದೇಶದ ಬಗ್ಗೆ ನಮಗೆಲ್ಲ ಅಪಾರ ಅಭಿಮಾನ, ಹೆಮ್ಮೆ ಇರಬೇಕು ಎಂದರು. ಪರಶುರಾಮ ಅಳಗೋಡಿ ಮಾತನಾಡಿ ಅನೇಕ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂದು ಅಭಿಪ್ರಾಯಪಟ್ಟರು.ಭಾಷಣ ಹಾಗೂ ದೇಶಭಕ್ತಿ ಗೀತೆಗಳ ಮೂಲಕ ವಿದ್ಯಾರ್ಥಿಗಳು ಭವ್ಯ ಭಾರತದ ಹಿರಿಮೆಯನ್ನು ಕೊಂಡಾಡಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ವಿನಾಯಕ ಬಡಿಗೇರ, ಉಪಾಧ್ಯಕ್ಷ ರಮೇಶ ಸೂರ್ಯವಂಶಿ, ಪದಾಧಿಕಾರಿಗಳಾದ ವಿಠ್ಠಲ ಕಂಬಳಿ, ನಾಗಪ್ಪ ಬೂದಿಹಾಳ, ಯಲ್ಲಪ್ಪ ಕುರಿ, ಮಾಜಿ ತಾ.ಪಂ.ಸದಸ್ಯರಾದ ಜನಕರಾಜ ಪಾಟೀಲ, ಗ್ರಾಮಸ್ಥರಾದ ತಾನಾಜಿ ಸೂರ್ಯವಂಶಿ, ಮಲ್ಲಿಕಾರ್ಜುನ ಜೇಡರ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ, ವೀರೇಂದ್ರ ಪಾಟೀಲ, ಮಂಜುಳಾ ಕಾಳಿ, ಸಂತೋಷ ಸಾಳುಂಕೆ, ಜ್ಯೋತಿ ಅಳಗೋಡಿ, ಗಂಗವ್ವ ಅಳಗೋಡಿ, ಮಹಾದೇವಿ ಸೊಗಲದ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮದ ಹಿರಿಯರು, ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಾನಿಕಾ ಕುಲಕರ್ಣಿ ನಿರೂಪಿಸಿದರು. ಭಾಗ್ಯಶ್ರೀ ಬಡಿಗೇರ ಸ್ವಾಗತಿಸಿದರು. ಶ್ರೇಯಾ ಸೂರ್ಯವಂಶಿ ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 