ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸಲು ಸ್ವಾತಂತ್ರ್ಯ ದಿನ ಆಚರಿಸಲಾಗುತ್ತಿದೆ: ಡಾ.ಜ್ಯೋತಿ ಪೂಜಾರ
Independence Day is being celebrated to commemorate the sacrifices of freedom fighters: Dr. Jyoti Po
ಸಿಂದಗಿ 16: ದೇಶವನ್ನು ಸ್ವಾತಂತ್ರ್ಯಗೊಳಿಸಲು, ತಾಯ್ನಾಡನ್ನು ರಕ್ಷಿಸಲು ಅದೆಷ್ಟೋ ವೀರ ಹೋರಾಟಗಾರರು ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಈ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸಲು ಪ್ರತಿವರ್ಷ ಆಗಸ್ಟ್ 15 ರಂದು ದೇಶದೆಲ್ಲೆಡೆ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ ಎಂದು ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಜ್ಯೋತಿ ಪೂಜಾರ ಹೇಳಿದರು. ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಚಷ್ಠಾನದ ಕ್ರೀಯೇಟಿವ್ ಕಿಡ್ಸ್ ಹೋಮ್ ಪೂರ್ವ ಪ್ರಾಥಮಿಕ ಹಾಗೂ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡ 79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಧ್ವಜಾರೋಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿತಿನಿ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ರಮೇಶ ಪೂಜಾರ, ಶಿಕ್ಷಕಿಯರಾದ ಅಶ್ವಿನಿ ಲೋಣಿ, ಸಾದನಾ ಇಮಡೆ, ಮಂಗಲಾ ಬಮ್ಮಣ್ಣಿ, ದಾನಮ್ಮ ಕೋರಿ, ಪ್ರೀಯಾ ಪವಾಡೆ, ರೇವತಿ ಬಳೂಂಡಗಿ, ಸುಶ್ಮಿತಾ ಕೋರಿ, ಸಂಚಿತಾ ಸೂರಪೂರ, ಸಿಬ್ಬಂಧಿಗಳಾದ ಅಂಬಿಕಾರಿ ಕರಿಶೆಟ್ಟಿ, ಹೇಮಾ ಬಡಿಗೇರ, ರೆಹಮತ್ತಬಿ, ಆನಂದಯ್ಯಸ್ವಾಮಿ ಹಿರೇಮಠ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಧ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ, ಸೈನಿಕರ ವೇಷಭೂಷಣದೊಂದಿಗೆ ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 