ದೇಶಪ್ರೇಮಿಗಳ ತ್ಯಾಗದಿಂದ ಸ್ವಾತಂತ್ರ್ಯ

ದೇಶಪ್ರೇಮಿಗಳ ತ್ಯಾಗದಿಂದ ಸ್ವಾತಂತ್ರ್ಯ Independence through the sacrifice of patriots

 ರಾಣಿಬೆನ್ನೂರು, ಆ. 16: ದೇಶಪ್ರೇಮಿಗಳ ತ್ಯಾಗ, ಬಲಿದಾನದಿಂದ ಭಾರತಕ್ಕೆ ಸ್ವಾತಂತ್ರ್ಯ ದೊರೆತಿದ್ದು, ಅದನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಬಿ.ಎ.ಜೆ.ಎಸ್‌.ಎಸ್‌. ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ. ಆರ್‌.ಎಂ. ಕುಬೇರ​‍್ಪ ಹೇಳಿದರು.  

ನಗರದ ಗಾಯತ್ರಿ ಆವರಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆಯಿಂದ ಯುವ ಸಮುದಾಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಭಾರತೀಯ ಸಂಸ್ಕೃತಿ, ಆಚಾರ, ವಿಚಾರ ಹಾಗೂ ಸಂಸ್ಕಾರಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ ಎಂದರು.  

ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಎಚ್‌.ಎ. ಭಿಕ್ಷಾವರ್ತಿಮಠ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಲೆಗಳಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದು ಹೇಳಿದರು.  

ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸುರೇಶ ಬಣಕಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್‌.ಎಂ. ಗೌಡರ್, ಎನ್‌.ಬಿ. ಕರಬಣ್ಣನವರ ಸೇರಿದಂತೆ ಹಲವರು ಭಾಗವಹಿಸಿದ್ದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.