ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷರಾಗಿ ಸ್ವತಂತ್ರ ದೇವ್ ಸಿಂಗ್ ಆಯ್ಕೆ

ಲಕ್ನೋ, ಜ.17, ಉತ್ತರ ಪ್ರದೇಶ ಬಿಜೆಪಿಯ ನೂತನ ಅಧ್ಯಕ್ಷರಾಗಿ ಶುಕ್ರವಾರ ಸ್ವತಂತ್ರ ದೇವ್ ಸಿಂಗ್ ಆಯ್ಕೆಯಾಗಿದ್ದಾರೆ.ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕೇಂದ್ರ ವೀಕ್ಷಕ ಭೂಪೇಂದ್ರ ಯಾದವ್ ಅವರು ನೂತನವಾಗಿ ಆಯ್ಕೆಯಾದ ಅಧ್ಯಕ್ಷರ ಹೆಸರನ್ನು ಪ್ರಕಟಿಸಿದರು. ನೂತನ ಅಧ್ಯಕ್ಷರನ್ನು ರಾಷ್ಟ್ರೀಯ ಪರಿಷತ್ತಿಗೆ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ.ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಗುರುವಾರ ದೇವ್ ಸಿಂಗ್ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಇಂದು ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ.ಪ್ರಧಾನ ಕಾರ್ಯದರ್ಶಿ ವಿಜಯ್ ಬಹದ್ದೂರ್ ಪಾಠಕ್ ಸೇರಿದಂತೆ ಬಿಜೆಪಿ ಹಿರಿಯ ಮುಖಂಡರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.ಇದಕ್ಕೂ ಮೊದಲು ಸಿಂಗ್ ಅವರನ್ನು ಜುಲೈ 19, 2019 ರಂದು ಯುಪಿ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಸಿಂಗ್ ಅವರನ್ನು ಮಾರ್ಚ್ 2017 ರಲ್ಲಿ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ರಾಜ್ಯ ಸಚಿವರನ್ನಾಗಿ ನೇಮಿಸಲಾಗಿದೆ