ಇಂಡಿ, ಚಡಚಣ, ತಾಳಿಕೋಟೆ ಬರಪೀಡಿತ ತಾಲೂಕುಗಳಾಗುವ ಸಾಧ್ಯತೆ
Indi, Chadachan, and Talikote likely to be declared drought-hit taluks
ವಿಜಯಪುರ 20: ಬರ ನಿರ್ವಹಣೆ ್ತಹಿ2020 ಮೌಲ್ಯಮಾಪನ ಮಾನದಂಡಗಳ ಆಧಾರದ ಮೇಲೆ ಇಂಡಿ, ಚಡಚಣ ಮತ್ತು ತಾಳಿಕೋಟೆ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಪರಿಗಣಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಬರಪೀಡಿತ ತಾಲೂಕುಗಳ ಘೋಷಣೆಯ ಪ್ರಕ್ರಿಯೆಯ ಭಾಗವಾಗಿ ಸೋಮವಾರದೊಳಗೆ ಈ ಮೂರು ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ಕಾರ್ಯ ಪೂರ್ಣಗೊಳಿಸಲಾಗುವುದು. ವರದಿಯ ಆಧಾರದ ಮೇಲೆ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.
ನಿರಂತರ ಮೂರು ವಾರಗಳ ಒಣಹವೆ, ಉಪಗ್ರಹ ಹಾಗೂ ರಿಮೋಟ್ ಸೆನ್ಸಿಂಗ್ ದತ್ತಾಂಶಗಳ ಆಧಾರದ ಮೇಲೆ ಬರದ ಪರಿಣಾಮವನ್ನು ಮೌಲ್ಯಮಾಪನ ಮಾಡಿ ಅರ್ಹ ತಾಲೂಕುಗಳನ್ನು ಗುರುತಿಸಲಾಗುತ್ತದೆ. ಬಳಿಕ ಸಚಿವ ಸಂಪುಟ ಉಪಸಮಿತಿಯ ಅನುಮೋದನೆಯೊಂದಿಗೆ ಕ್ಷೇತ್ರ ಪರೀಶೀಲನೆ ನಡೆಸಲಾಗುತ್ತದೆ.
ಗ್ರೌಂಡ್ ಟ್ರೂಥಿಂಗ್ ಆ್ಯಪ್ ಮೂಲಕ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಯಾದೃಚ್ಛಿಕವಾಗಿ ಆಯ್ಕೆಯಾದ ಗ್ರಾಮಗಳ ಸರ್ವೆ ನಂಬರ್‌ಗಳಲ್ಲಿ ಬೆಳೆಹಾನಿ ಪರೀಶೀಲನೆ ನಡೆಸುತ್ತಾರೆ. ವರದಿಯ ಆಧಾರದ ಮೇಲೆ ತಾಲೂಕುಗಳನ್ನು ಮಧ್ಯಮ ಅಥವಾ ತೀವ್ರ ಬರಪೀಡಿತ ಎಂದು ವರ್ಗೀಕರಿಸಲಾಗುತ್ತದೆ.
ವಿಜಯಪುರ, ಕೊಲ್ಹಾರ, ನಿಡಗುಂದಿ, ಬಸವನ ಬಾಗೇವಾಡಿ, ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ಪೂರ್ಣಗೊಂಡಿದ್ದು, ಇವುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಸರ್ಕಾರ ಈಗಾಗಲೇ ಅಧಿಸೂಚಿಸಿದೆ.
ಸಿಂದಗಿ, ಆಲಮೇಲ, ದೇವರಹಿಪ್ಪರಗಿ ಮತ್ತು ಮುದ್ದೇಬಿಹಾಳ ತಾಲೂಕುಗಳಿಗೆ ಗ್ರೌಂಡ್ ಟ್ರೂಥಿಂಗ್‌ಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 