ನವದೆಹಲಿ 10: ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು 4 ವಿಕೆಟ್ ಅಂತರದ ಜಯ ಸಾಧಿಸಿರುವ ಭಾರತ, ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.
ಪಂದ್ಯ ಗೆದ್ದು ಟ್ರೋಫಿ ಪಡೆದ ಭಾರತಕ್ಕೆ 2025ರ ಐಪಿಎಲ್‌ಗಾಗಿ ನಡೆದ ಹರಾಜಿನಲ್ಲಿ ರಿಷಭ್ ಪಂತ್ ಪಡೆದ ಸಂಭಾವನೆಗಿಂತ ಕಡಿಮೆ ಹಣ ಪ್ರಶಸ್ತಿ ರೂಪದಲ್ಲಿ ದೊರಕಿದೆ.
ಈ ಬಾರಿಯ ಐಪಿಎಲ್‌ನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ಆಯ್ಕೆಯಾಗಿರುವ ಪಂತ್ ರೂ. 27 ಕೋಟಿ ಪಡೆದಿದ್ದಾರೆ. ಆದರೆ ಚಾಂಪಿಯನ್ಸ್ ತಂಡ ಭಾರತಕ್ಕೆ ರೂ. 20 ಕೋಟಿ ನಗದು ಬಹುಮಾನ ದೊರಕಿದೆ.
ಮತ್ತೊಂದೆಡೆ, ಪಂದ್ಯದಲ್ಲಿ ಎರಡನೇ ಸ್ಥಾನ ಪಡೆದ ನ್ಯೂಜಿಲೆಂಡ್ ತಂಡಕ್ಕೆ ರೂ. 9.72 ಕೋಟಿ ರೂ. ಬಹುಮಾನ ನೀಡಲಾಗಿದೆ.
ದುಬೈನಲ್ಲಿ ಭಾನುವಾರ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 251 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಭಾರತ ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ 6 ವಿಕೆಟ್‌ಗೆ 254 ರನ್ ಗಳಿಸಿ ಜಯ ಸಾಧಿಸಿತ್ತು.