ಮುಂಬೈ, ಜ 13 ಜನವರಿ 24 ರಿಂದ ನ್ಯೂಜಿಲೆಂಡ್ ವಿರುದ್ಧ ಆರಂಭವಾಗುವ ಐದು ಪಂದ್ಯಗಳ ಟಿ-20 ಸರಣಿಗೆ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದು, ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಕೈ ಬಿಡಲಾಗಿದೆ.ಶ್ರೀಲಂಕಾ ವಿರುದ್ಧ ತವರು ಸರಣಿಯಿಂದ ವಿಶ್ರಾತಿ ಪಡೆದಿದ್ದ ಉಪ ನಾಯಕ ರೋಹಿತ್ ಶರ್ಮಾ ಹಾಗೂ ಮೊಹಮ್ಮದ್ ಶಮಿ ತಂಡಕ್ಕೆ ಮರಳಿದ್ದಾರೆ. ಈ ಸರಣಿಯಲ್ಲಿ ಭಾರತ 2-0 ಅಂತರದಲ್ಲಿ ಜಯ ಸಾಧಿಸಿತ್ತು. ಜ. 14 ರಿಂದ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇವರಿಬ್ಬರು ಕಾಣಿಸಿಕೊಳ್ಳಲಿದ್ದಾರೆ.
ಮೊಣಕಾಲು ಗಾಯದಿಂದ ಚೇತರಿಸಿಕೊಂಡಿರುವ ಶಿಖರ್ ಧವನ್ ತಂಡಕ್ಕೆ ಮರಳಿದ್ದಾರೆ. ಆದ್ದರಿಂದ ರೋಹಿತ್ಶರ್ಮಾ ಜತೆ ಯಾರು ಆರಂಭಿಕರಾಗಲಿದ್ದಾರೆಂಬ ಕುತೂಹಲ ಹೆಚ್ಚಿಸಿದೆ. ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಮೊದಲನೇ ಟಿ20 ಪಂದ್ಯವನ್ನು ಅಕ್ಲೆಂಡ್ ನಲ್ಲಿ ಜ. 24 ರಂದು ಆಡಲಿದೆ. ಜ.26 ರಂದು ಎರಡನೇ ಹಾಗೂ ಐದನೇ ಹಾಗೂ ಕೊನೆಯ ಪಂದ್ಯ ಫೆ.2 ರಂದು ನಡೆಯಲಿದೆ.ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಪರೀಕ್ಷೆ ಯಲ್ಲಿ ವಿಫಲರಾದ ಕಾರಣ ಅವರ ಸ್ಥಾನಕ್ಕೆ ವಿಜಯ್ ಶಂಕರ್ ಅವರಿಗೆ ಭಾರತ ಎ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ.ಭಾರತ ಟಿ20 ತಂಡ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪ ನಾಯಕ), ಕೆ.ಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ರಿಷಭ್ ಪಂತ್(ವಿ.ಕೀ), ಶಿವಂ ದುಬೆ, ಕುಲ್ದೀಪ್ ಯಾದವ್, ಯಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್.