ಧಾರ್ಮಿಕ ಪರಂಪರೆಯಲ್ಲಿ ಭಾರತ ಶ್ರೇಷ್ಠ: ಎಂ.ಬಿ. ಪಾಟೀಲ
India excels in religious heritage: M.B. Patil
ವಿಜಯಪುರ 15: ಧಾರ್ಮಿಕ ಪರಂಪರೆ ಮತ್ತು ಆಧ್ಯಾತ್ಮಿಕತೆಯಲ್ಲಿ ಭಾರತ ಜಗತ್ತಿನಲ್ಲಿಯೇ ಶ್ರೇಷ್ಠ ಸ್ಥಾನ ಹೊಂದಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ಸೋಮವಾರ ಬಬಲೇಶ್ವರ ತಾಲೂಕಿನ ಬೆಳ್ಳುಬ್ಬಿ ಗ್ರಾಮದ ಮಳೆ ಮಲ್ಲೇಶ್ವರ ದೇವಸ್ಥಾನದಲ್ಲಿ ನಡೆದ ಅಜಾತ ನಾಗಲಿಂಗ ಮಹಾಸ್ವಾಮಿಗಳ ಮಹಾಪುರಾಣ ಹಾಗೂ ಭಜನಾ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಭಕ್ತಿ, ಜ್ಞಾನ ಹಾಗೂ ಸಂಸ್ಕೃತಿಯ ಸಂಗಮವಾಗಿರುವ ಇಂತಹ ಕಾರ್ಯಕ್ರಮಗಳು ಮಾನವೀಯತೆಯನ್ನು ಜಾಗೃತಗೊಳಿಸಿ ಧರ್ಮದ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆ ನೀಡುತ್ತವೆ. ಪುರಾಣ ಮತ್ತು ಪ್ರವಚನಗಳ ಮೂಲಕ ನಮ್ಮ ಇತಿಹಾಸವನ್ನು ತಿಳಿಯಲು ಸಾಧ್ಯವಾಗುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಎಲ್ಲರೂ ಪಾಲ್ಗೊಂಡು ‘ಅನೇಕತೆಯಲ್ಲಿ ಏಕತೆ’ ಸಾಧಿಸಬೇಕು ಎಂದರು. ಶರಣರು ಪ್ರತಿಪಾದಿಸಿದ ಅನುಭವ ಮಂಟಪದ ಪರಿಕಲ್ಪನೆ ಪ್ರತಿ ಗ್ರಾಮದಲ್ಲೂ ಸಾಕಾರಗೊಳ್ಳಬೇಕು.
ಎಲ್ಲ ಜಾತಿ, ವರ್ಗ ಹಾಗೂ ಜನಾಂಗದವರು ಒಗ್ಗಟ್ಟಿನಿಂದ ಬದುಕಬೇಕು. ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ಸೌಹಾರ್ದತೆ ಮತ್ತು ಏಕತೆ ಇದ್ದಲ್ಲಿ ಗ್ರಾಮಗಳಲ್ಲಿ ಶಾಂತಿ ನೆಲೆಸುತ್ತದೆ ಎಂದು ಹೇಳಿದರು. ಗಣಲಿಂಗ ದೇವರು ಹಿರೇಮಠ, ಆಸಂಗಿ ಹಿರೇಮಠದ ಶ್ರೀಗಳು ಹಾಗೂ ಚಂದ್ರಶೇಖರ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ನ್ಯಾಯವಾದಿ ಶ್ರೀನಿವಾಸ ಕೊಂಡಗೂಳಿ, ಬಸವರಾಜ ದೇಸಾಯಿ, ರಮೇಶ ಬಶೆಟ್ಟಿ, ಶಿವಾನಂದ ನ್ಯಾಮಗೌಡ, ಬಸವರಾಜ ಜೈನಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 