ವಿಶ್ವಸಂಸ್ಥೆ ಖಾಯಂ ಸದಸ್ಯತ್ವ ಪಡೆಯಲು ಭಾರತಕ್ಕೆ ಎಲ್ಲ ಅರ್ಹತೆಯಿದೆ: ಜೈಶಂಕರ್
ವಾಷಿಂಗ್ಟನ್, ಅ 3: ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಖಾಯಂ ಸದಸ್ಯತ್ವ ಪಡೆಯುವ ಎಲ್ಲ ಅರ್ಹತೆ ಭಾರತಕ್ಕೆ ಇದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ವಾಷಿಂಗ್ಟನ್ನಲ್ಲಿ ಹೇಳಿದ್ದಾರೆ. ಭಾರತ ಇಲ್ಲದೇ ವಿಶ್ವಸಂಸ್ಥೆಯ ವಿಶ್ವಾಸಾರ್ಹತೆಗೂ ಕುಂದು ಬರುವ ಸಾಧ್ಯತೆಯಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವಕ್ಕಾಗಿ ಕಳೆದ ಹಲವು ವರ್ಷಗಳಿಂದಲೂ ಆಗ್ರಹಿಸುತ್ತಿದೆ. ಈ ಕುರಿತಂತೆ ಅಮೆರಿಕದಲ್ಲಿ ನಡೆದ ಸಮಾರಂಭದಲ್ಲಿ ಪ್ರಸ್ತಾಪಿಸಿದ್ದು, ವಿಶ್ವದ ಅತಿ ದೊಡ್ಡ ಆರ್ಥಿಕತೆ ಮತ್ತು ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಸದಸ್ಯ ದೊರೆಯದೆ ಹೋದರೇ ವಿಶ್ವಸಂಸ್ಥೆಯ ವಿಶ್ವಾಸಾರ್ಹತೆಯ ಮೇಲೂ ಪರಿಣಾಮ ಬೀರಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ರಷ್ಯಾದಿಂದ ಎಸ್-400 ಟ್ರಯಂಫ್ ಕ್ಷಿಪಣಿಗಳನ್ನು ಖರೀದಿಸುವ ಭಾರತದ ನಿರ್ಧಾರದ ಬಗ್ಗೆ ಅಮೆರಿಕ ಸರಕಾರದ ಮನವೊಲಿಕ ಪ್ರಯತ್ನವನ್ನೂ ವಿದೇಶಾಂಗ ಸಚಿವ ಜೈಶಂಕರ್ನಡೆಸಿದ್ದಾರೆ. ಭಾರತದ ಅಗತ್ಯವನ್ನು ಅಮೆರಿಕ ಅರಿಯಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 