ಸೆಮಿಫೈನಲ್‌ಗೆ ಪ್ರವೇಶ ಪಡೆದ ಭಾರತ: ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ

India into semi-finals: Australia vs India

ದುಬೈ 03: ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿಯಲ್ಲಿ ಕೊನೆಯ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. 

ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್‌ಗಳಲ್ಲಿ 249 ರನ್‌ಗಳಿಗೆ ಆಲೌಟ್ ಆಯಿತು. ಆರಂಭದಲ್ಲೇ ರೋಹಿತ್ ಶರ್ಮಾ, ಶುಭಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದಾಗ ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್ ತಂಡಕ್ಕೆ ನೆರವಾದರು.

250 ರನ್‌ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 45.3 ಓವರ್‌ಗಳಲ್ಲಿ 205 ರನ್ ಗಳಿಸಿ ಆಲೌಟ್ ಆಯಿತು. ವರುಣ್ ಚಕ್ರವರ್ತಿ ಐದು, ಕುಲದೀಪ್ ಯಾದವ್ ಎರಡು, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು. 33ನೇ ಓವರ್‌ನಲ್ಲಿ ರವೀಂದ್ರ ಜಡೇಜಾ ಟಾಮ್ ಲಾಥಮ್ ಅವರ ವಿಕೆಟ್ ಕಬಳಿಸಿದರು. 

ವರುಣ್ ಚಕ್ರವರ್ತಿ 10 ಓವರ್ ಗಳಲ್ಲಿ 42 ರನ್ ಬಿಟ್ಟುಕೊಟ್ಟು 5 ವಿಕೆಟ್ ಪಡೆಯುವ ಮೂಲಕ ಮಿಂಚಿದರು. ಈ ಮೂಲಕ ಭಾರತ ಸೆಮಿಫೈನಲ್‌ಗೆ ಪ್ರವೇಶ ಪಡೆದು, ಸೆಮಿಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. 

2023ರ ಏಕದಿನ ವಿಶ್ವಕಪ್ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳಲು ಭಾರತಕ್ಕೆ ಇದೀಗ ಅವಕಾಶ ಸಿಕ್ಕಿದೆ. ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಸೆಣಸಲಿವೆ.