ಬಾಗಲಕೋಟೆ27: ವಿವಿಧ ಜನಾಂಗ, ಸಂಸ್ಕೃತಿ, ಪರಂಪರೆಗಳನ್ನು ಹೊಂದಿರುವ ಹಾಗೂ ವೈವಿಧ್ಯತೆಯಲ್ಲಿ ಏಕತೆಯನ್ನು, ಹೊಂದಿದ ಏಕೈಕ ರಾಷ್ಟ್ರ ಭಾರತವೆಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ 70ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ದೇಶಕಂಡ ಅನನ್ಯ ಪ್ರತಿಭೆ ಡಾ.ಬಿ.ಆರ್.ಅಂಬೇಡ್ಕರ ಅವರ ನೇತೃತ್ವದಲ್ಲಿ ಸತತ ಅಧ್ಯಯನ, ಚಚರ್ೆಗಳ ಅವಿತರ ಶ್ರಮದ ಫಲವಾಗಿ ಭಾರತ ಸಂವಿಧಾನ ರಚನೆಗೊಂಡ ಈ ದಿನ ಭಾರತೀಯರೆಲ್ಲರಿಗೂ ಮರೆಯಲಾಗದ ಸುದಿನ ಎಂದರು.
ಆಗಸ್ಟ ಮಾಹೆಯಲ್ಲಿ ಉಂಟಾದ ಪ್ರವಾಹದಿಂದ ಜಿಲ್ಲೆಯಲ್ಲಿ ಒಟ್ಟು 195 ಗ್ರಾಮಗಳು ಪ್ರವಾಹ ಪರಿಸ್ಥಿತಿಗೆ ಎದುರಾಗಿ 43,136 ಕುಟುಂಬಗಳ 1.49 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಪರಿಹಾರ ಕೇಂದ್ರಗಳಲ್ಲಿ ಊಟ ಮತ್ತು ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಲಾಗಿದೆ. 69,473 ಜಾನುವಾರುಗಳನ್ನು ಸ್ಥಳಾಂತರಿಸಲಾಗಿದೆ. ಸಂತ್ರಸ್ತರ ಆರೋಗ್ಯ ದೃಷ್ಠಿಯಿಂದ 224 ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗಿದೆ. 50,352 ಸಂತ್ರಸ್ತ ಕುಟುಂಬಗಳಿಗೆ ಸರಕಾರ ತಲಾ 10 ಸಾವಿರ ರೂ.ಗಳಂತೆ ತುತರ್ು ಪರಿಹಾರ, ವಿಶೇಷ ಆಹಾರ ಪೊಟ್ಟಣ ವಿತರಿಸಲಾಗಿದೆ ಎಂದು ತಿಳಿಸಿದರು.
ನೆರ ಹಾವಳಿಯಿಂದ 46389 ಬಾಧಿತ ಕುಟುಂಬಗಳಿಗೆ ವಿಶೇಷ ಆಹಾರ ಪೊಟ್ಟಣ ವಿತರಿಸಲು ರೂ.380 ಲಕ್ಷಗಳ ಅನುದಾನ ಬಳಕೆ ಮಾಡಲಾಗಿದೆ. ಪ್ರವಾಹದಿಂದ ಬಾಧಿತವಾದ 40113 ರೈತರಿಗೆ ಒಟ್ಟು ರೂ.84.04 ಕೋಟಿ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಎ ಮತ್ತು ಬಿ ಮಾದರಿ ಸೇರಿ 3195 ಮನೆ ಹಾನಿ ಸಂತ್ರಸ್ತರಿಗೆ 31.95 ಕೋಟಿ ಮೊದಲ ಕಂತಿನ ಪರಿಹಾರವನ್ನು ನೇರವಾಗಿ ಸಂತ್ರಸ್ತರ ಖಾತೆಗಳಿಗೆ ಜಮಾ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 8801 ಸಿ ಮಾದರಿಯ ಮನೆ ಹಾನಿಗಳಿಗೆ ತಲಾ ರೂ.50 ಸಾವಿರದಂತೆ ಒಟ್ಟು ರೂ.44 ಕೋಟಿಗಳ ಪರಿಹಾರವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿರುವುದಾಗಿ ತಿಳಿಸಿದರು.
ಮೂಲಭೂತ ಸೌಲಭ್ಯಗಳ ತುತರ್ು ದುರಸ್ಥಿಗಾಗಿ 50 ಕೋಟಿ ರೂ. ಬಿಡುಗಡೆಯಾಗಿದ್ದು, ಇದರಲ್ಲಿ ಹೆಸ್ಕಾಂ ಇಲಾಖೆಗೆ ವಿದ್ಯುತ್ ಕಂಬ, ಟಿಸಿ ಮತ್ತು ವಿದ್ಯುತ್ ಮಾರ್ಗ ದುರಸ್ತಿಗಾಗಿ ರೂ.39.11 ಕೋಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಾಲಾ ಕೊಠಡಿ ದುರಸ್ತಿಗೆ ರೂ.2.69 ಕೋಟಿ, ಅಂಗನವಾಡಿಯ 102 ಕೇಂದ್ರಗಳ ದುರಸ್ತಿಗಾಗಿ 146.55 ಲಕ್ಷ ಹಾಗೂ ರಸ್ತೆ ದುರಸ್ಥಿಗಾಗಿ ರೂ.6.70 ಕೋಟಿ ನೀಡಲಾಗಿದೆ.
ಬಾಗಲಕೋಟೆ ನಗರವು ಆಲಮಟ್ಟಿ ಹಿನ್ನೀರಿನಿಂದ ಮುಳುಗಡೆಯಾಗಿದ್ದು, ಜನತೆ ಸ್ಥಳಾಂತರಗೊಂಡಿದ್ದರಿಂದ ಅವರಿಗೆ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುಕೂಲವಾಗುವಂತೆ ನಗರ ಅಭಿವೃದ್ದಿ ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದಜರ್ೆಗೇರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಮುಳುಗಡೆ ಸಂತ್ರಸ್ತರು ಸಮಸ್ಯೆಗಳ ಪರಿಹಾರಕ್ಕಾಗಿ ಅಲೆಯುವದನ್ನು ತಪ್ಪಿಸಲು ಕಂದಾಯ ಇಲಾಖೆಯ ಅಧೀನದಲ್ಲಿ ಬಿಟಿಡಿಎಗೆ ಹೆಚ್ಚಿನ ಸಂಪನ್ಮೂಲ ನಿರೀಕ್ಷೆಯೊಂದಿಗೆ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರದ ಸಜ್ಜಾಗಿದ್ದು, ತಾಂತ್ರಿಕ ಒಪ್ಪಿಗೆ ಮಾತ್ರ ಬಾಕಿ ಉಳಿದಿದೆ ಎಂದು ತಿಳಿಸಿದರು.
ಬಾಗಲಕೋಟೆ ನಗರ ಯೋಜನಾ ಪ್ರಾಧಿಕಾರವನ್ನು ಮೇಲ್ದಜರ್ೆಗೆ ಏರಿಸಿ ಬಾಗಲಕೋಟೆ ಅಭಿವೃದ್ದಿ ಪ್ರಾಧಿಕಾರಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ. ಇದರಿಂದ ನಗರದ ಸುತ್ತಲೂ ಹೊಸ ಬಡಾವಣೆ ನಿಮರ್ಾಣ, ನಗರ ಬೆಳೆವಣಿಗೆಗೆ ಸಾಧ್ಯವಾಗಲಿದೆ. ಸಂತ್ರಸ್ತರಲ್ಲದವರಿಗೂ ಸಾಕಷ್ಟು ಅನುಕೂಲವಾಗಲಿದೆ. ಈ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಆಲಮಟ್ಟಿಯ ಆಣೆಕಟ್ಟಿನ ಎತ್ತರವನ್ನು 519 ಮೀಟರ್ನಿಂದ 524 ಮೀಟರವರೆಗೆ ಹೆಚ್ಚಿಸಬೇಕಿದ್ದು, ಮುಳುಗಡೆಯಾಗುವ 20 ಹಳ್ಳಿಗಳ ಸ್ಥಳಾಂತರಕ್ಕೆ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ವೀರಣ್ಣ ಚರಂತಿಮಠ ವಹಿಸಿದ್ದರು. ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಸಂಸದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗಿರಮಾ ಪನ್ವಾರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಪೋಲಿಸ್ ಇಲಾಖೆಯಿಂದ ರಾಷ್ಟ್ರಗೀತೆ, ಪೊಲೀಸ್ ಪಡೆ, ಗೃಹ ರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ ಹಾಗೂ ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಯಿತು. ಬಸವೇಶ್ವರ ಕಲಾ ಮಹಾವಿದ್ಯಾಲಯದ ವಿದ್ಯಾಥರ್ಿಗಳಿಂದ ನಾಡಗೀತೆ ಮತ್ತು ರೈತಗೀತೆ, ನಂತರ ವಿವಿಧ ಶಾಲಾ ಮಕ್ಕಳಿಂದ ನೃತ್ಯರೂಪಕ ಜರುಗಿದವು.