ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ: ಎಲ್ ಕೃಷ್ಣನಾಯಕ
India is a great democracy: L Krishnanayak
ಹೂವಿನ ಹಡಗಲಿ 26: ವಿಶ್ವದಲ್ಲಿಯೇ ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಶಾಸಕ ಎಲ್ ಕೃಷ್ಣನಾಯಕ ಅಭಿಮತ ವ್ಯಕ್ತಪಡಿಸಿದರು.
ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿನಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರೆ್ಣ ಮಾಡಿ ಗೌರವ ಸಲ್ಲಿಸಿದರು.ಬುಧವಾರ ಸಮಾಜ ಕಲ್ಯಾಣ, ಶಾಲಾ ಶಿಕ್ಷಣ ಇಲಾಖೆ, ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದನವೆಂಬರ್ 26ಸಂವಿಧಾನ ಅಂಗೀಕಾರ ದಿನದ ಅಂಗವಾಗಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜನ ಸಾಮಾನ್ಯರ ಬದುಕು ಹಸನಾಗಲು ಡಾ ಬಿ ಆರ್ ಅಂಬೇಡ್ಕರ್ ಸಂವಿಧಾನವನ್ನು ರಚಿಸಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಎಲ್ಲರಿಗೂ ಮತದಾನ ಹಕ್ಕು ಇದೆ ಎಂದರು.ತಹಶೀಲ್ದಾರ್ ಜಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಆನಂದ್ ಡೊಳ್ಳಿನ, ಬಿ ಇ ಒ ಮಹೇಶ್ ಪೂಜಾರ, ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಬ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಪರೀವೀಕ್ಷಕ ರಫಿ ಅಹಮದ್ ಖವಾಸ್ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ, ಜಿ ಪಿ ಜಿ ಕಾಲೇಜು ಪ್ರಾಂಶುಪಾಲ ಕೋರಿ ಹಾಲೇಶ್, ಕವಿ ಶಂಕರ್, ಬೆಟಗೇರಿ ಕನ್ನಡ ಜಾಗೃತಿ ಸಮಿತಿ ಸದಸ್ಯ ಸುರೇಶ ಅಂಗಡಿ ಶಿಕ್ಷಣ ಸಂಯೋಜಕರು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಭಾರತದ ಸಂವಿಧಾನ ಪ್ರಸ್ತಾವನೆಯನ್ನು ಎಲ್ಲರೂ ಸಾಮೂಹಿಕವಾಗಿ ಪಠಿಸಿದರು.ಅಂಬೇಡ್ಕರ್ ವೃತ್ತದಿಂದ ನಡೆದ ಜಾಥಾಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದ ಮೂಲಕ ಸಂಚರಿಸಿತು.ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ನಂತರದಹಾಸ್ಟೆಲ್ ವಿದ್ಯಾರ್ಥಿಗಳುಜಾಥಾದಲ್ಲಿ ಭಾಗವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 