ಭಾರತ ಪುರುಷ, ಮಹಿಳೆಯರ ತಂಡಗಳ ಆಯ್ಕೆ ಜ. 12ಕ್ಕೆ

ನವದೆಹಲಿ, ಜ 9                        ಮುಂಬರುವ ನ್ಯೂಜಿಲೆಂಡ್ ಪ್ರವಾಸ ಹಾಗೂ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಗೆ ಭಾರತ ಪುರುಷರ ಹಾಗೂ ಮಹಿಳಾ ತಂಡಗಳನ್ನು ಜನವರಿ 12 ರಂದು ಆಯ್ಕೆ ಮಾಡಲಾಗುತ್ತದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮೂಲಗಳು ತಿಳಿಸಿವೆ.  

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್ ಪುರುಷರ ತಂಡ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಐದು ಟಿ-20, ಮೂರು ಏಕದಿನ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಐಸಿಸಿ ಟಿ-20 ಮಹಿಳಾ ವಿಶ್ವಕಪ್ ಫೆಬ್ರುವರಿ 21 ರಿಂದ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿದೆ. 

 ಪ್ರಸ್ತುತ ಭಾರತ ತಂಡ, ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿ ಆಡುತ್ತಿದೆ. ಕೊಹ್ಲಿ ಪಡೆ 1-0 ಮುನ್ನಡೆಯಲ್ಲಿದ್ದು, ನಾಳೆ ಮೂರನೇ ಹಾಗೂ ಕೊನೆಯ ಪಂದ್ಯವನ್ನು ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ  ಆಡಲಿದೆ. ಮೊದಲನೇ ಪಂದ್ಯ ಮಳೆಗೆ ಬಲಿಯಾಗಿತ್ತು. ಎರಡನೇ ಪಂದ್ಯದಲ್ಲಿ ಭಾರತ ಏಳು ವಿಕೆಟ್ ಜಯಬೇರಿ ಬಾರಿಸಿತ್ತು. ಶ್ರೀಲಂಕಾ ವಿರುದ್ಧದ ಟಿ-20 ಸರಣಿ ಬಳಿಕ ಹಿಂದೆಯೇ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡಲಿದೆ.