ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವಾಗಿದೆ: ರಮೇಶ ಅಳಗುಂಡಿ
Indian Constitution is the best written constitution in the world: Ramesh Alagundi
ಬೆಟಗೇರಿ 27: ಭಾರತ ಸಂವಿಧಾನವು ಭಾರತೀಯ ಪ್ರಜಾಪ್ರಭುತ್ವ ಭದ್ರ ಬುನಾದಿಯಾಗಿದೆ. ನಮ್ಮ ಸಂವಿಧಾನ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿದಿದೆ ಎಂದು ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ನ.26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವಾಗಿದೆ ಎಂದರು.
ಸ್ಥಳೀಯ ಪ್ರೌಢ ಶಾಲೆಯ ಅತಿಥಿಶಿಕ್ಷಕ ಮಂಜುನಾಥ ಸವತಿಕಾಯಿ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನ ಕುರಿತು ಮಾತನಾಡಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜಾ ಸಮರೆ್ನ ನೆರವೇರಿಸಿದ ಬಳಿಕ ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು.
ಸ್ಥಳೀಯ ಪ್ರೌಢ ಶಾಲೆಯ ಸಹಶಿಕ್ಷಕರಾದ ಈರಣ್ಣ ಪಟಗುಂದಿ, ಪ್ರಕಾಶ ಕುರಬೇಟ, ರಾಕೇಶ ನಡೋಣಿ, ಶುಭಾ.ಬಿ., ಗಣಪತಿ ಭಾಗೋಜಿ, ಭಾಗ್ಯಶ್ರೀ ನಾಯಕ, ಸಿರಾಜಅಹಮ್ಮದ ಜಿಡ್ಡಿಮನಿ, ಸೌಮ್ಯಾಶ್ರೀ ಗಂಗಾ, ಕಿರಣ ಕಮತ, ಸವಿತಾ ಜೋಗಿ, ಆನಂದ ಬಡಿಗೇರ, ಶ್ರೀಲಕ್ಷ್ಮಿ ಕಾಶಪ್ಪನವರ, ಸಹ ಶಿಕ್ಷಕರು, ಅತಿಥಿಶಿಕ್ಷಕರು, ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 