ಬ್ರುಸೆಲ್ಸ್‌ನಲ್ಲಿ ಭಾರತ-ಐರೋಪ್ಯ ಒಕ್ಕೂಟದ ಶೃಂಗಸಭೆ

ನವದೆಹಲಿ, ಡಿ  23,  ಮುಂದಿನ ವರ್ಷ ಭಾರತ-ಐರೋಪ್ಯ ಒಕ್ಕೂಟದ ಶೃಂಗಸಭೆಯನ್ನು ಬ್ರುಸೆಲ್ಸ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಮಾತನಾಡಿದ ಸಮಯದಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಪ್ರಧಾನ ಮಂತ್ರಿಯ ಅಧಿಕೃತ ವೆಬ್‌ಸೈಟ್‌ ಪ್ರಕಾರ  ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಮೋದಿ ಅವರು ಮೈಕೆಲ್ ಅವರನ್ನು ಅಭಿನಂದಿಸಿ, ಯಶಸ್ಸು ಸಾಧಿಸುವಂತೆಯೂ ಶುಭ ಹಾರೈಸಿದ್ದಾರೆ. ಮೈಕೆಲ್ ನೇತೃತ್ವದಲ್ಲಿ ಭಾರತ- ಐರೋಪ್ಯ ಒಕ್ಕೂಟ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ವರ್ಷ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಹೊರತಾಗಿ ನ್ಯೂಯಾರ್ಕ್‌ನಲ್ಲಿ ತಮ್ಮ ಭೇಟಿಯನ್ನು ನೆನಪಿಸಿಕೊಂಡ ಮೋದಿ, ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದ (ಬಿಟಿಐಎ), ಸಂಪರ್ಕ ಪಾಲುದಾರಿಕೆ, ಯುರೋಪಾಲ್, ಯುರೋಟಮ್, ಭಯೋತ್ಪಾದನೆ ನಿಗ್ರಹ ಮತ್ತು ಹವಾಮಾನ ಬದಲಾವಣೆ ಕುರಿತು ಶೃಂಗಸಭೆಯನ್ನು ಮುಂದಿನ ವರ್ಷ ಬ್ರಸೆಲ್ಸ್‌ನಲ್ಲಿ ನಡೆಯಲು ಇಬ್ಬರೂ ನಾಯಕರು ಸಮ್ಮತಿಸಿದ್ದಾರೆ.