ವಸಾಹತುಶಾಹಿ ವಿಸ್ತರಣಾ ತಂತ್ರಗಳನ್ನರಿಯಲು ಭಾರತೀಯರು ವಿಫಲ
Indians failed to understand colonial expansion strategies
ಲೋಕದರ್ಶನ ವರದಿ
ಗದಗ 08: ಬಹುತ್ವ ರಾಜಕೀಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಭಾರತಕ್ಕೆ ವ್ಯಾಪಾರಕ್ಕಾಗಿ ಆಗಮಿಸಿದ ವಸಾಹತುಶಾಹಿಗಳಲ್ಲಿ ಬ್ರಿಟಿಷರು ತಮ್ಮ ಪ್ರಾಬಲ್ಯ ಸಾಧಿಸಲು ‘ಒಡೆದು ಆಳುವ’ ನೀತಿಯನ್ನು ಅನುಸರಿಸಿ ಯಶಸ್ವಿಯಾಗಿ ಬಹುಕಾಲದವರೆಗೆ ಭಾರತವನ್ನಾಳಿದರೆಂದು ಮುಳಗುಂದದ ಆರ್.ಎನ್. ದೇಶಪಾಂಡೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಪ್ರೊ. ಕೆ.ಎಂ. ಶಿರೂರ ಹೇಳಿದರು.
ಅವರು ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗವು ಐಕ್ಯುಎಸಿ ಅಡಿಯಲ್ಲಿ ಆಯೋಜಿಸಿದ್ದ ‘ಭಾರತದಲ್ಲಿ ವಸಾಹತುಶಾಹಿ ವಿಸ್ತರಣೆಗೆ ನಡೆದ ಯುದ್ಧಗಳು’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತ, ವಸಾಹತುಶಾಹಿಗಳು ಭಾರತದಲ್ಲಿ ರಾಜಕೀಯ ಮತ್ತು ಆರ್ಥಿಕವಾಗಿ ಪ್ರಭುತ್ವ ಸಂಪಾದಿಸಲು ಭಾರತೀಯ ಅರಸರ ದೌರ್ಬಲ್ಯಗಳು ಮತ್ತು ಸಾಮಾಜಿಕ ವ್ಯವಸ್ಥೆಯ ಭಿನ್ನಾಭಿಪ್ರಾಯಗಳನ್ನು ಅಸ್ತ್ರಗಳನ್ನಾಗಿ ಬಳಸಿಕೊಂಡರು. ಅವರ ತಂತ್ರಗಳನ್ನು ಅರಿಯಲು ಭಾರತೀಯ ಅರಸರು ವಿಫಲರಾದರೆಂದು ಹೇಳಿದರು.
ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಅಪ್ಪಣ್ಣ ಹಂಜೆ ಪ್ರಾಸ್ತಾವಿಕವಾಗಿ ಮಾತನಾಡುತ್ತ, ಭಾರತಕ್ಕೆ ವ್ಯಾಪಾರಕ್ಕಾಗಿ ಆಗಮಿಸಿದ ವಸಾಹತುಶಾಹಿಗಳಲ್ಲಿ ಬ್ರಿಟಿಷರು ವ್ಯಾಪಾರದಲ್ಲಿ ತಮ್ಮೊಂದಿಗೆ ಪೈಪೋಟಿ ನಡೆಸಿದ್ದ ಪೋರ್ಚುಗೀಸರು, ಡಚ್ಚರು, ಡೇನರು, ಫ್ರೇಂಚರನ್ನು ರಾಜಕೀಯ ತಂತ್ರಗಳಿಂದ ಹೊರಹಾಕಿ ಸ್ಥಳೀಯ ಅರಸರನ್ನು ಯುದ್ಧಗಳಲ್ಲಿ ಸೋಲಿಸಿ ಭಾರತವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಕೈಗೊಂಡ ತಂತ್ರಗಳು ಭಾರತೀಯರ ಏಕತೆಯನ್ನು ನಾಶಪಡಿಸಿದವು ಎಂದು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಐಕ್ಯುಎಸಿ ಸಂಚಾಲಕ ಡಾ. ಜಿತೇಂದ್ರ ಜಹಗೀರದಾರ ವಿದ್ಯಾರ್ಥಿಗಳು ಇತಿಹಾಸವನ್ನು ಕೇವಲ ಪರೀಕ್ಷೆಗೆ ಓದದೆ ಸಮಕಾಲೀನ ಮೌಲ್ಯಗಳನ್ನು ಅರಿಯಲು ಓದಬೇಕೆಂದು ಹೇಳುತ್ತ, ಇತಿಹಾಸವು ಭವಿಷ್ಯತ್ತನ್ನು ಸಮರ್ಕವಾಗಿ ರೂಪಿಸಿಕೊಳ್ಳಲು ಹೆದ್ದಾರಿಯಾಗಿದೆ ಎಂದು ಹೇಳಿದರು. ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ. ಬಸವಂತಪ್ಪ ದೊಡ್ಡಮನಿ ಕಾರ್ಯಕ್ರಮ ನಡೆಸಿಕೊಟ್ಟರು. ಇತಿಹಾಸ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 