ಸೋಮಪ್ಪ ಕೆರೆಯ ಮೇಲೆ 5 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ : ಶಾಸಕ ಜೆ.ಎನ್.ಗಣೇಶ
Indoor stadium to be built on Somappa Lake at a cost of Rs 5 crore: MLA J.N. Ganesh
ಕಂಪ್ಲಿ 24: ಪಟ್ಟಣದ ಐತಿಹಾಸಿಕ ಸೋಮಪ್ಪ ಕೆರೆ ಅಂಗಳದಲ್ಲಿರುವ ಜಾಗದಲ್ಲಿ ಸುಮಾರು 5 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಇದರಿಂದ ಕ್ರೀಡಾಪಟುಗಳಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು. ಅವರು ಮಂಗಳವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಇಲ್ಲಿನ ಕ್ರೀಡಾಂಗಣದಲ್ಲಿ ಬಾಸ್ಕೇಟ್ ಬಾಲ್, ವ್ಯಾಯಾಮ, ಬ್ಯಾಡ್ಮಿಂಟನ್, ಧ್ಯಾನ ಕೇಂದ್ರ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಅನುಕೂಲ ಮಾಡಿಕೊಡಲಾಗುವುದು. ಕಂಪ್ಲಿ ಮತ್ತು ಕುರುಗೋಡಿನಲ್ಲಿ ಕ್ರೀಡೆಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ. ಯುವಕರಲ್ಲಿ ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ಇದೆ. ಪ್ರತಿಯೊಂದು ಕ್ರೀಡೆಗಳಿಗೆ ಪ್ರೋತ್ಸಾಹ ನೀಡಲಾಗುವುದು. ಯುವಕರು ಶಿಕ್ಷಣದ ಜೊತೆಗೆ ಕ್ರೀಡೆಗಳಿಗೆ ಆಧ್ಯತೆ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಉಪಾಧ್ಯಕ್ಷ ಶರಣಗೌಡ, ಕಂಪ್ಲಿ ಬ್ಲಾಕ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಪುರಸಭೆ ಮಾಜಿ ಸದಸ್ಯ ಸಿ.ಆರ್.ಹನುಮಂತ, ಮುಖಂಡರಾದ ಕೆ.ಷಣ್ಮುಕಪ್ಪ, ರಾಘವೇಂದ್ರ, ಪೇಂಟರ್ ಮಸ್ತಾನ್ ಸೇರಿದಂತೆ ಇತರರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 