ಇಂದೋರ್ ದುರಂತ: ಸಂತ್ರಸ್ತರು, ಕುಟುಂಬಗಳನ್ನು ಭೇಟಿಯಾದ ರಾಹುಲ್
Indore tragedy: Rahul meets victims, families
ಇಂದೋರ್: ಕಲುಷಿತ ನೀರು ಕುಡಿದು ವಾಂತಿ, ಭೇದಿಯಿಂದ ಹಲವು ಮಂದಿ ಮೃತಪಟ್ಟು, ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಧ್ಯಪ್ರದೇಶದ ಇಂದೋರ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 4 ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಕುಟುಂಬ ಸದಸ್ಯರನ್ನೂ ಭೇಟಿಯಾದರು.
ಮಧ್ಯಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ಜೀತು ಪಟ್ವಾರಿ ಮತ್ತು ಪಕ್ಷದ ಮುಖಂಡ ಉಮಂಗ್ ಸಿಂಗಾರ್ ರಾಹುಲ್ ಜೊತೆಗಿದ್ದರು. ಕಲುಷಿತ ನೀರಿನ ದುರಂತ ಸಂಭವಿಸಿದ ಭಗೀರಥಪುರ ಪ್ರದೇಶಕ್ಕೂ ಭೇಟಿ ನೀಡಿದ ರಾಹುಲ್, ಮೃತರ ಸಂಬಂಧಿಕರನ್ನು ಭೇಟಿಯಾಗಿ ಸಂತೈಸಿದರು.
ಕಲುಷಿತ ನೀರು ಸೇವನೆಯಿಂದ ವಾಂತಿ ಮತ್ತು ಭೇದಿ ಸಂಭವಿಸಿ 24 ಮಂದಿ ಮೃತಪಟ್ಟಿದ್ದಾರೆ ಎಂದು ಭಗೀರಥಪುರದ ನಿವಾಸಿಗಳು ರಾಹುಲ್ಗೆ ತಿಳಿಸಿದ್ದಾರೆ. ಆದರೆ, ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ಮಧ್ಯ ಪ್ರದೇಶ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಈ ನಡುವೆ ಸರ್ಕಾರಿ ಸ್ವಾಮ್ಯದ ಮಹಾತ್ಮ ಗಾಂಧಿ ಮೆಮೊರಿಯಲ್ ಮೆಡಿಕಲ್ ಕಾಲೇಜಿನ ವೈದ್ಯರ ತಂಡ ನಡೆಸಿದ ಆಡಿಟ್ನಲ್ಲಿ 15 ಮಂದಿ ಮಾತ್ರ ವಾಂತಿ ಭೇದಿಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಲಾಗಿತ್ತು. ಮೃತರ ಕುಟುಂಬಗಳಿಗೆ ಸರ್ಕಾರ ತಲಾ 2 ಲಕ್ಷ ಪರಿಹಾರ ನೀಡಿತ್ತು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 