ಕೆಎಲ್‌ಇ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಾರ್ಯಕ್ರಮ

ಕೆಎಲ್‌ಇ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಾರ್ಯಕ್ರಮ  Induction program for first-year students at KLE College

ಗದಗ 23: ಕೆಎಲ್‌ಇ ಸಂಸ್ಥೆಯ ಕಲೆ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ 2026ಹಿ27್ಫೂ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಎ. ಹಾಗೂ ಬಿ.ಕಾಂ ವಿದ್ಯಾರ್ಥಿಗಳಿಗಾಗಿ ಗುರುವಾರ ಪ್ರವೇಶಾತಿ (ಓರಿಯಂಟೇಶನ್) ಕಾರ್ಯಕ್ರಮ ಆಯೋಜಿಸಲಾಯಿತು.  

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಆಂಗ್ಲ-ಉರ್ದು ಪಿಯು ಕಾಲೇಜಿನ ಪ್ರಾಂಶುಪಾಲ ಐ.ಪಿ. ಹಾದಿಮನಿ ಮಾತನಾಡಿ, ಬಿ.ಎ. ಹಾಗೂ ಬಿ.ಕಾಂ ಪದವಿ ಪೂರ್ಣಗೊಳಿಸಿದ ಬಳಿಕ ಸರ್ಕಾರಿ, ಖಾಸಗಿ, ಬ್ಯಾಂಕಿಂಗ್, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಉದ್ಯಮಶೀಲತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಉದ್ಯೋಗ ಮತ್ತು ಉನ್ನತ ಶಿಕ್ಷಣದ ಅವಕಾಶಗಳಿವೆ ಎಂದು ತಿಳಿಸಿದರು.  

ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಿಕೊಂಡು ಕಠಿಣ ಪರಿಶ್ರಮ, ಸಮಯದ ಸದ್ಬಳಕೆ, ಸಮಯಪಾಲನೆ ಹಾಗೂ ನಿರಂತರ ಕೌಶಲ್ಯಾಭಿವೃದ್ಧಿಯ ಮೂಲಕ ಯಶಸ್ಸು ಸಾಧಿಸಬೇಕು. ಜೊತೆಗೆ ಪೋಷಕರು ಮತ್ತು ಶಿಕ್ಷಕರಿಗೆ ಗೌರವ ನೀಡಿ, ಶಿಸ್ತುಬದ್ಧ ಜೀವನವನ್ನು ರೂಢಿಸಿಕೊಳ್ಳುವಂತೆ ಸಲಹೆ ನೀಡಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಎ.ಕೆ. ಮಠ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅತ್ಯಂತ ಮಹತ್ವದ್ದಾಗಿದೆ. ಉತ್ತಮ ನಡವಳಿಕೆ, ನಿಯಮ ಪಾಲನೆ ಹಾಗೂ ಜವಾಬ್ದಾರಿಯುತ ವ್ಯಕ್ತಿತ್ವವೇ ಯಶಸ್ಸಿನ ಅಡಿಪಾಯ ಎಂದು ಹೇಳಿದರು.  

ಕಾರ್ಯಕ್ರಮದ ಆರಂಭದಲ್ಲಿ ಡಾ. ವಿಠ್ಠಲ ಕೋಳಿ ಅತಿಥಿಗಳು ಹಾಗೂ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಡಾ. ವೀಣಾ ಇ. ಕಾರ್ಯಕ್ರಮದ ಉದ್ದೇಶವನ್ನು ಪರಿಚಯಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ವೀಣಾ ತಿಲಾರಪುರ ನಿರೂಪಿಸಿದರು.  ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.