ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಸಿಂಧೂ ಪರಿಹಾರ

ಹೈದರಾಬಾದ್ ,  ಮಾ 26ಕೊರೊನಾ ವೈರಸ್ ಸೋಂಕು ಹರಡುವ ವಿರುದ್ಧದ ಹೋರಾಟಕ್ಕೆ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧೂ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಕೋವಿಡ್ -19 ವಿರುದ್ಧ ಹೋರಾಟದ ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಿಂಧೂ ತಲಾ 5 ಲಕ್ಷ ರೂ.ದಾನ ನೀಡಿದ್ದಾರೆ.
ಕೊರೊನಾ ವಿರುದ್ಧ ಹೋರಾಡಲು ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಿಗೆ "ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ" ತಲಾ ಐದು ಲಕ್ಷ ರೂ. ದೇಣಿಗೆ ನೀಡುತ್ತೇನೆ "ಎಂದು ಅವರು ಟ್ವೀಟ್ ಮಾಡಿದ್ದಾರೆ.ಇದಕ್ಕೂ ಮುನ್ನ ನಟ ಪವನ್ ಕಲ್ಯಾಣ್, ಕೊರೊನಾ ವಿರುದ್ಧದ ಹೋರಾಟಕ್ಕೆ ಒಟ್ಟು 2 ಕೋಟಿ ರೂ. ಪರಿಹಾರ ನೀಡಿದ್ದಾರೆ. ಆಂಧ್ರ ಪ್ರೇದಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂ, ನೀಡಿದರೆ, ಪ್ರಧಾನಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ನೀಡಿದ್ದಾರೆ. ರೈಲ್ವೆಯಲ್ಲಿ ಕೆಲಸದಲ್ಲಿರುವ ಸ್ಟಾರ್ ಕುಸ್ತಿಪಟು ಬಜರಂಗ್ ಪೂನಿಯಾ, ಹರಿಯಾಣ ಕೊರೊನಾ ಪರಿಹಾರ ನಿಧಿಗೆ ಆರು ತಿಂಗಳ ದಾನವನ್ನು ಘೋಷಿಸಿದ್ದಾರೆ. ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್, 50 ಲಕ್ಷ ರೂ. ಪರಿಹಾರ ನೀಡಿದ್ದಾರೆ.