ವಿದ್ಯಾರ್ಥಿಗಳ ಸ್ವಾವಲಂಬನೆಗೆ ಕೈಗಾರಿಕಾ ತರಬೇತಿ ಅವಶ್ಯಕ
Industrial training is essential for self-reliance of students
ಕುಕುನೂರು 08: ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದವರು ಬೇಗನೆ ಸ್ವಾವಲಂಬಿಗಳಾಗುತ್ತಿದ್ದು, ಭವಿಷ್ಯದ ಜೀವನ ರೂಪಿಸಿಕೊಳ್ಳುವಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಪಾತ್ರ ಹೇಳಿದಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಎಸ್ ಆರ್ ಹಿರೇಮಠ ಅಭಿಪ್ರಾಯಪಟ್ಟರು ಅವರು ಕುಕುನೂರು ತಾಲೂಕಿನ ಮಂಡಲಗಿರಿಯ ಶ್ರೀ ಜಗದ್ಗುರು ತೋಂಟದಾರ್ಯ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎರಡನೇ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಓದಿನಲ್ಲಿ ಆಸಕ್ತಿ, ಮಾಡುವ ಕಾಯಕದಲ್ಲಿ ನಿಷ್ಠೆ, ಬದುಕಿನಲ್ಲಿ ಛಲ, ಇತರರಿಗೆ ಮಾದರಿಯಾಗಬಲ್ಲ ಜೀವನ ಕ್ರಮ ಇವುಗಳು ನಮ್ಮವಾಗಿದ್ದರೆ ಹೆತ್ತವರಿಗೂ, ಶಿಕ್ಷಣ ಸಂಸ್ಥೆಗೆ, ನಮ್ಮ ಜೀವನಕ್ಕೂ ಬೆಲೆ ಸಿಕ್ಕಂತಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಪ್ರಾಚಾರ್ಯ ಸಿ ಎಸ್ ಅಂಗಡಿ ಮಾತನಾಡಿ, ಕೈಗಾರಿಕಾ ವಲಯಗಳಲ್ಲಿ ಮಾನವ ಸಂಪನ್ಮೂಲದ ಬೇಡಿಕೆ ಹೆಚ್ಚಿತ್ತಿದೆ. ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ಪಡೆದ ತರಬೇತುದಾರರಿಗೆ ವಿಪುಲ ಅವಕಾಶಗಳಿದ್ದು ಅವುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂಬ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಶ್ರೀ ಹನುಮಂತಪ್ಪ ಉಪ್ಪಾರ, ವಿ ಎಚ್ ಮೇಟಿ, ಎಸ್ ಬಿ ಚಂಗಳಿ, ಎಸ್ ಸಿ ಪಾಟೀಲ, ಸಿಬ್ಬಂದಿ ವರ್ಗ, ತರಬೇತುದಾರರು ಹಾಜರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 