ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ ಸೋಂಕು

ಮಂಗಳೂರು, ಮೇ 9, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25ಕ್ಕೇರಿದೆ.ಫಸ್ಟ್‌ ನ್ಯೂರೋ ಆಸ್ಪತ್ರೆಯ ಸಂಪರ್ಕ ಹೊಂದಿದ್ದ  ಒಂದೇ ಕುಟುಂಬದ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷನಿಗೆ ಸೋಂಕು ದೃಢಪಟ್ಟಿದೆ.ಮೇ 1ರಂದು ಕೊರೋನಾ ಪತ್ತೆಯಾಗಿದ್ದ 64 ವರ್ಷದ ಸೋಂಕಿತ 578 ವೃದ್ಧನಿಂದ ಇವರಿಗೆ ಸೋಂಕು ಬಂದಿದೆ ಎನ್ನಲಾಗಿದೆ.
ಬಂಟ್ವಾಳ ಕಸಬಾ ಹೋಬಳಿಯ ಮೃತ ಮಹಿಳೆಯ ಸಂಬಂಧಿಕರು ಮತ್ತು ನೆರೆಮನೆಯವರಾಗಿರುವ ವೃದ್ಧನಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರ ಮನೆಯ 8 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ಅವರಲ್ಲಿ ಮೂವರಿಗೆ ಪಾಸಿಟಿವ್ ಇರುವುದು ಪತ್ತೆಯಾಗಿದೆ.ಫಸ್ಟ್ ನ್ಯೂರೋ ಸಂಪರ್ಕದಿಂದ ಇದುವರೆಗೆ 17 ಮಂದಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 25 ಮಂದಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಇದುವರೆಗೆ ಮೂವರು ಮೃತಪಟ್ಟಿದ್ದು, 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.