ಡಾ. ಸಚೀನ ಆಸ್ಪತ್ರೆಯಲ್ಲಿ ಡಿಸೆಂಬರ್ 14ರಂದು ಬಂಜೆತನ ನಿವಾರಣೆ, ಉಪಚಾರ ಶಿಬಿರ
Infertility prevention and treatment camp on December 14 at Dr. Sachina Hospital
ಲೋಕದರ್ಶನ ವರದಿ
ಡಾ. ಸಚೀನ ಆಸ್ಪತ್ರೆಯಲ್ಲಿ ಡಿಸೆಂಬರ್ 14ರಂದು ಬಂಜೆತನ ನಿವಾರಣೆ, ಉಪಚಾರ ಶಿಬಿರ
ಕಾಗವಾಡ, 12 : ಮಹಾರಾಷ್ಟ್ರದ ಮಿರಜ ಪಟ್ಟಣದ ಸಚೀನ ಆಸ್ಪತ್ರೆಯಲ್ಲಿ ರವಿವಾರ ದಿ. 14 ರಂದು ಉಚಿತ ಮಹಿಳೆಯರ ಲೈಂಗಿಕ ರೋಗಗಳು, ಬಂಜೆತನ ನಿವಾರಣೆ ಹಾಗೂ ಉಪಚಾರ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಖ್ಯಾತ ಸ್ತ್ರೀರೋಗ ತಜ್ಞ ಡಾ. ಸಚೀನ ಸುಗಣ್ಣವರ ತಿಳಿಸಿದ್ದಾರೆ.
ಮಿರಜದಲ್ಲಿನ ಸಚೀನ ಆಸ್ಪತ್ರೆಯು ಬಂಜೆತನ ನಿವಾರಣೆ ಹಾಗೂ ಮಹಿಳೆಯರ ಲೈಂಗಿಕ ರೋಗಗಳ ನಿವಾರಣೆ ಕುರಿತು ಕಳೆದ ಹಲವಾರು ವರ್ಷಗಳಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಏರಿ್ಡಸಿ, ತನ್ನದೇ ಆದ ರೀತಿಯಲ್ಲಿ ಸಾಮಾಜಿಕ ಕಾರ್ಯವನ್ನು ಕೈಗೊಳ್ಳುತ್ತಿದೆ.
ಈ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ, ಅತ್ಯಾಧುನಿಕ ಯಂತ್ರೋಪಕರಣಗಳು ಜೊತೆಗೆ ಆಸ್ಪತ್ರೆಯು ಹೈಟೆಕ್ ಸೌಲಭ್ಯವನ್ನು ಹೊಂದಿದೆ. ಪ್ರತಿ ತಿಂಗಳು ಮಹಿಳೆಯರ ಎಲ್ಲ ಲೈಂಗಿಕ ರೋಗಗಳ ಮತ್ತು ಬಂಜೆತನ ನಿವಾರಣೆ ಹಾಗೂ ಉಪಚಾರ ಶಿಬಿರವನ್ನು ಉಚಿತವಾಗಿ ಹಮ್ಮಿಕೊಳ್ಳುತ್ತಿದೆ.
ಈಗಾಗಲೇ ಶಿಬಿರದ ಲಾಭವನ್ನು ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಅನೇಕ ರೋಗಿಗಳು ಪಡೆದುಕೊಂಡಿದ್ದಾರೆ.
ಲೈಂಗಿಕ ರೋಗಗಳಿಂದ ಬಳಲುವ ಹಾಗೂ ಮಕ್ಕಳಾಗದೇ ಇರುವ ದಂಪತಿಗಳು ರವಿವಾರ ದಿ. 14 ರಂದು ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ಜರುಗುವ ಶಿಬಿರದಲ್ಲಿ ಉಚಿತ ಆರೋಗ್ಯ ತಪಾಸಣೆ, ಉಪಚಾರ ಮತ್ತು ಕಡಿಮೆ ಖರ್ಚಿನಲ್ಲಿ ಶಸ್ತ್ರಕ್ರೀಯೆ ಮಾಡಲಾಗುವುದು. ಇದರ ಲಾಭವನ್ನು ಪಡೆದುಕೊಳ್ಳುವಂತೆ ಡಾ. ಸಚೀನ ಸುಗಣ್ಣವರ ಮತ್ತು ನೇಹಾ ಸುಗಣ್ಣವರ ಕರೆ ನೀಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 9765010834 ಸಂಪರ್ಕಿಸಬಹುದು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 